Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಷ್ಣು ಸ್ಮಾರಕ ವಿಚಾರದಲ್ಲಿ ನಾವೆಲ್ಲ...

ವಿಷ್ಣು ಸ್ಮಾರಕ ವಿಚಾರದಲ್ಲಿ ನಾವೆಲ್ಲ ಅಸಹಾಯಕರು: ಸಚಿವೆ ಜಯಮಾಲಾ

ವಾರ್ತಾಭಾರತಿವಾರ್ತಾಭಾರತಿ30 Nov 2018 4:07 PM IST
share
ವಿಷ್ಣು ಸ್ಮಾರಕ ವಿಚಾರದಲ್ಲಿ ನಾವೆಲ್ಲ ಅಸಹಾಯಕರು: ಸಚಿವೆ ಜಯಮಾಲಾ

ಉಡುಪಿ, ನ. 30: ವಿಷ್ಣುವರ್ಧನ್ ಸ್ಮಾರಕದ ವಿಚಾರದಲ್ಲಿ ಮುಖ್ಯಮಂತ್ರಿ ಸೇರಿದಂತೆ ನಮಗೆಲ್ಲರಿಗೂ ಅಸಹಾಯಕತೆ ಇದೆ. ನಾವು ಎಲ್ಲಿ ಸ್ಮಾರಕ ಮಾಡಲು ಹೋದರೂ ಅಲ್ಲಿ ಒಂದು ವಿವಾದ ಎದುರಾಗುತ್ತಿದೆ. ಇಷ್ಟು ವರ್ಷ ಗಳಾದರೂ ವಿಷ್ಣುವರ್ಧನ್ ಅವರ ಸ್ಮಾರಕ ಆಗದಿರುವ ಬಗ್ಗೆ ನಮಗೂ ನೋವು ಇದೆ. ಆದುದರಿಂದ ನಾವೆಲ್ಲರೂ ಭಾರತಿ ಅವರ ಪರ ನಿಂತಿದ್ದೇವೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಷ್ಣುವರ್ಧನ್ ಸ್ಮಾರಕ ವಿವಾದಕ್ಕೆ ಸಂಬಂಧಿಸಿ ಭಾರತಿ ಅವರ ಬೇಸರ ಸಹಜ. ಭಾರತಿ ಕುಟುಂಬಕ್ಕೆ ನಾನು ಬೆಲೆ ಕೊಡ್ತೇನೆ. ವಿಷ್ಣುವರ್ಧನ್ ಸ್ಮಾರಕ ಮೈಸೂರಿ ನಲ್ಲಿ ಆಗಲಿ ಅಂತ ಭಾರತಿ ಕೇಳುತ್ತಿದ್ದಾರೆ. ಮೈಸೂರಿನಲ್ಲೇ ಹುಟ್ಟಿ, ಪ್ರಾಣ ಬಿಟ್ಟಿರುವ ವಿಷ್ಣು ವರ್ಧನ್‌ಗೆ ಮೈಸೂರು ಅಂದರೆ ಪ್ರಾಣ. ವಿಷ್ಣು ಆಸೆ ಏನು ಎಂಬುದು ಅವರ ಕುಟುಂಬಕ್ಕೆ ಗೊತ್ತಿರುತ್ತದೆ. ಹಾಗಾಗಿ ನಾವು ಭಾರತಿಯವರ ಮಾತಿಗೆ ಗೌರವ ಕೊಡಬೇಕಾಗಿದೆ ಎಂದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಸಿನೆಮಾ ರಂಗದವರು. ಆದುದರಿಂದ ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಭಾರತಿಯವರ ಜಾಗದಲ್ಲಿ ಭೂಮಿಗೆ ಸಂಬಂದಪಟ್ಟ ಸಣ್ಣ ತಕರಾರು ಇದೆ. ನಿನ್ನೆ ಮುನಿರತ್ನ, ಮಂಜು ಸಂಧಾನ, ಮಾತುಕತೆ ಮಾಡಿದ್ದಾರೆ. ಅವರು ಅವರ ಅಭಿಪ್ರಾಯಗಳನ್ನು ಪತ್ರದ ಮೂಲಕ ಭಾರತಿ ಅವರಿಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಅಂಬರೀಷ್ ಸ್ಮಾರಕ ಖಚಿತ: ಅಂಬರೀಷ್ ಒಬ್ಬ ಮಹಾನ್ ನಾಯಕ. ನಿಜವಾದ ಜನನಾಯಕ. ಜನರ ಹೃದಯದಲ್ಲಿ ವಾಸ ಮಾಡಿದ ಶ್ರೇಷ್ಠನಟ. ಅವರ ಸ್ಮಾರಕ ಖಂಡಿತವಾಗಿಯೂ ಕಂಠೀರವ ಸ್ಟುಡಿಯೋದಲ್ಲಿ ಆಗುತ್ತದೆ. ಸ್ಮಾರಕಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸಚಿವರು ಹೇಳಿದರು.

ಅಂಬರೀಶ್ ಅಂತ್ಯಸಂಸ್ಕಾರದಲ್ಲಿ ನಟಿ ರಮ್ಯಾ ಭಾಗವಹಿಸದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಐ ಆ್ಯಂ ವೇರಿ ಸ್ವಾರಿ. ಅವರಿಗೆ ಹುಷಾರಿಲ್ಲ ಅಂತ ಹೇಳ್ಕೊಂಡಿದ್ದಾರೆ. ಇದರಲ್ಲಿ ರಾಜಕೀಯ ಕಾರಣ ಇರಲಿಕ್ಕಿಲ್ಲ. ಹೆಣ್ಣು ಮಕ್ಕಳಿಗೆ ಹಲವಾರು ತೊಂದರೆಗಳಿರುತ್ತದೆ. ಮುಂದೆ ಅವರು ಅಂಬರೀಶ್ ಅವರ ವೈಕುಂಠ ಸಮಾರಾಧನೆಗೆ ಬರಬಹುದು ಎಂದರು.

ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಮುಂಬೈಗೆ ತೆರಳಿರುವ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೋಗೋರು ಹೋಗ್ತಾ ಇರುತ್ತಾರೆ. ಸರಕಾರ ಭದ್ರವಾಗಿರುತ್ತದೆ. ಅದೆಲ್ಲ ಬರೀ ಸುಳ್ಳು ಎಂದು ತಿಳಿಸಿದರು.

ಟೋಲ್ ಸಮಸ್ಯೆ: ಕೇಂದ್ರಕ್ಕೆ ನಿಯೋಗ

ಜಿಲ್ಲೆಯ ಟೋಲ್‌ಗೇಟ್ ಸಮಸ್ಯೆಗೆ ಸಂಬಂಧಿಸಿ ರಾಜ್ಯ ಲೋಕೋಪಯೋಗಿ ಸಚಿವರು ಸೇರಿದಂತೆ ನಾವೆಲ್ಲರು ದೆಹಲಿಗೆ ನಿಯೋಗ ತೆರಳಿ ಕೇಂದ್ರ ಸಚಿವ ಗಡ್ಕರಿ ಅವರನ್ನು ಮನವಿ ಮಾಡುವ ಬಗ್ಗೆ ನಿರ್ಧರಿಸಲಾಗಿದೆ. ಸರ್ವಿಸ್ ರಸ್ತೆ ಪೂರ್ಣಗೊಳಿಸುವವರೆಗೆ ಸ್ಥಳೀಯ ವಾಹನಗಳಿಗೆ ಟೋಲ್‌ನಿಂದ ರಿಯಾಯಿತಿ ನೀಡುವಂತೆ ಸಚಿವರಿಗೆ ಮನವಿ ಮಾಡಲಾಗುವುದೆಂದು ಸಚಿವೆ ಜಯಮಾಲಾ ತಿಳಿಸಿದರು.

ಟೋಲ್‌ಗೇಟ್‌ಗೆ ಸಂಬಂಧಿಸಿದಂತೆ ಯಾರು ಮಾತನಾಡಿದರೂ ಹಕ್ಕುಚ್ಯುತಿ ಆಗುತ್ತದೆ. ಈ ವಿಚಾರದಲ್ಲಿ ನನಗೂ ಯಾವುದೇ ಕ್ರಮ ತೆಗೆದುಕೊಳ್ಳಲು ಆಗು ವುದಿಲ್ಲ. ಎಲ್ಲದಕ್ಕೂ ಗಡ್ಕರಿ ಅವರೇ ಉತ್ತರ ಕೊಡಬೇಕು. ಅದು ಬಿಟ್ಟರೆ ನಮಗೆ ಬೇರೆ ಯಾವುದೇ ದಾರಿ ಇಲ್ಲ. ಮಾರ್ಚ್ ಒಳಗಡೆ ಸರ್ವಿಸ್ ರಸ್ತೆ ಮಾಡು ವುದಾಗಿ ಕಂಪೆನಿಯವರು ಭರವಸೆ ನೀಡಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X