ಬಂಟ್ವಾಳ: ಅನಿಲ ಬೆಲೆ ಏರಿಕೆ ವಿರುದ್ಧ ಎಸ್ಡಿಪಿಐ ಪ್ರತಿಭಟನೆ

ಬಂಟ್ವಾಳ, ನ. 30: ಅನಿಲ, ಪೆಟ್ರೋಲ್ ಡಿಸೆಲ್ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರತಿಭಟನಕಾರರನ್ನು ಉದ್ದೇಶಿಸಿ ಮತನಾಡಿ, ಡಿಸೆಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲ ಬೆಲೆ ದಿನೇ ದಿನೇ ಹೆಚ್ಚುತ್ತಿದೆ. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಲು ಕೇಂದ್ರ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜನಸಾಮಾನ್ಯರ ಬದುಕು ಬವಣೆಯನ್ನು ಕೇಳುವವರೇ ಇಲ್ಲದಂತಾಗಿದ್ದು, ಕೂಡಲೇ ಕೇಂದ್ರ ಸರಕಾರ ಬೆಲೆ ಇಳಿಕೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಎಸ್ಡಿಪಿಐ ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಇಕ್ಬಾಲ್ ಐಎಂಆರ್, ಪುರಸಭಾ ಸದಸ್ಯರಾದ ಮುನೀಶ್ ಅಲಿ, ಇದ್ರೀಸ್ ಪಿ.ಜೆ., ಸಮಿತಿ ಸದಸ್ಯ ಮಲಿಕ್ ಕೊಳಕೆ, ಇಮ್ರಾನ್ ಪಿಜೆ., ಸತ್ತಾರ್ ಕಲ್ಲಡ್ಕ ಮತ್ತಿತರರು ಹಾಜರಿದ್ದರು.
ರಹಿಮಾನ್ ಮಠ ಸ್ವಾಗತಿಸಿ, ವಂದಿಸಿದರು.