11 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ನ.30: ರಾಜ್ಯ ಸರಕಾರವು 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ-ವಿ.ಮಂಜುಳಾ, ಯೋಜನೆ ಮತ್ತು ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ-ಡಾ.ಶಾಲಿನಿ ರಜನೀಶ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ-ಜಿ.ಕುಮಾರ್ ನಾಯ್ಕರನ್ನು ವರ್ಗಾವಣೆ ಮಾಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ- ಎಸ್.ಆರ್.ಉಮಾಶಂಕರ್, ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ-ವಿ.ಪೊನ್ನುರಾಜ್, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ-ಶಿವಯೋಗಿ ಸಿ.ಕಳಸದ್‌ರನ್ನು ವರ್ಗಾವಣೆ ಮಾಡಲಾಗಿದೆ.
ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ-ಡಾ.ಎನ್.ವಿ.ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ-ಡಿ.ರಣದೀಪ್, ಚೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ- ಡಾ.ಎಚ್.ಎನ್.ಗೋಪಾಲಕೃಷ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತ-ಪಿ.ವಸಂತಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ-ಡಾ.ಪಿ.ಸಿ.ಜಾಫರ್‌ರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.





