ಅಪರಿಚಿತ ವಾಹನ ಢಿಕ್ಕಿ: ಪಾದಾಚಾರಿ ಮೃತ್ಯು
ಉಡುಪಿ, ನ.30: ನಗರದ ಪೂತ್ತೂರು ರಾಷ್ಟ್ರೀಯ ಹೆದ್ದಾರಿ 66ರ ಶ್ರೀ ಭಗವತಿ ದುರ್ಗಾಪರಮೇಶ್ವರಿ ದೇವಸ್ಥಾನ ತಿರುವಿನ ರಸ್ತೆಯಲ್ಲಿ ಇಂದು ಸಂಜೆ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 60 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಢಿಕ್ಕಿ ಹೊಡೆದ ನಂತರ ವಾಹನವನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟರೆನ್ನಲಾಗಿದೆ.
ಈ ಬಗ್ಗೆ ಉಡುಪಿ ನಗರ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು, ವಾರಸುದಾರರರು ನಗರ ಸಂಚಾರ ಠಾಣೆ ಅಥವಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಸಂಪರ್ಕಿಸುವಂತೆ ತಿಳಿಸಲಾಗಿದೆ.
Next Story