ಸಿನೆಮಾ ನಿರ್ಮಾಪಕನ ಕೊಲೆ ಪ್ರಕರಣ: ಇಬ್ಬರು ಮಹಿಳೆಯರು ಸೇರಿ 6 ಜನರ ಸೆರೆ

ಬೆಂಗಳೂರು, ನ.30: ಚಲನಚಿತ್ರ ನಿರ್ಮಾಪಕರೊಬ್ಬರನ್ನು ದುಷ್ಕರ್ಮಿಗಳು ಉಸಿರುಗಟ್ಟಿಸಿ ಕೊಲೆಗೈದು ಶವವನ್ನು ಕಾಲುವೆಗೆ ಎಸೆದು ಪರಾರಿಯಾಗಿದ್ದ ಆರೋಪ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ ಆರು ಜನರನ್ನು ಇಲ್ಲಿನ ಕೆಂಗೇರಿ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಡಿಗೆ ಹಣ ಕೊಡುವ ವಿಚಾರ ಹಾಗೂ ವೈಯಕ್ತಿಕ ದ್ವೇಷದಿಂದ ಚಲನಚಿತ್ರ ನಿರ್ಮಾಪಕ ರಮೇಶ್ ಕುಮಾರ್ ಜೈನ್ ಎಂಬುವರನ್ನು ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಸ್ಲಾಂಖಾನ್, ಹಾಶಿಂ, ಅಹ್ಮದ್, ಝುಬೇರ್, ಹೀನಾ, ಶಬೀನಾ ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ದೀಪಾಂಜಲಿ ನಗರದಲ್ಲಿರುವ ಮನೆಯನ್ನು ಬಾಡಿಗೆಗೆ ನೀಡಿದ್ದ ರಮೇಶ್ ಕುಮಾರ್ ಜೈನ್ ಅವರು ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ವಾಸವಾಗಿದ್ದರು. ಕೆಲವು ಚಿತ್ರಗಳನ್ನು ನಿರ್ಮಿಸಿದ್ದ ರಮೇಶ್ ಕುಮಾರ್ ಜೈನ್ ಅವರು ಮೈಲಸಂದ್ರದಲ್ಲಿ ಪ್ಲಾಸ್ಟಿಕ್ ಕಾರ್ಖಾನೆಯನ್ನು ಸಹ ನಡೆಸುತ್ತಿದ್ದರು ಎನ್ನಲಾಗಿದೆ.
Next Story





