Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 1ರಂದು ಸರಪಾಡಿಯಲ್ಲಿ ಹೊನಲು ಬೆಳಕಿನ...

ಡಿ. 1ರಂದು ಸರಪಾಡಿಯಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ

ವಾರ್ತಾಭಾರತಿವಾರ್ತಾಭಾರತಿ30 Nov 2018 10:56 PM IST
share
ಡಿ. 1ರಂದು ಸರಪಾಡಿಯಲ್ಲಿ ಹೊನಲು ಬೆಳಕಿನ ಪ್ರೊ ಕಬಡ್ಡಿ

ಬಂಟ್ವಾಳ, ನ. 30: ಯುವಕ ಮಂಡಲ ಸರಪಾಡಿ ಇದರ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಪ್ರೊ ಮಾದರಿಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವು ಡಿ. 1ರಂದು ಯುವಕ ಮಂಡಲದ ಅವರಣದಲ್ಲಿ ನಡೆಯಲಿದೆ ಎಂದು ಯುವಕ ಮಂಡಲದ ಗೌರವ ಸಲಹೆಗಾರ ಸರಪಾಡಿ ಆಶೋಕ ಶೆಟ್ಟಿ ಅವರು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ವೇಳೆ ಯುವಕಮಂಡಲದಲ್ಲಿ ಮೂರು ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಅಡುಗೆ ಕೋಣೆಯ ಉದ್ಘಾಟನೆ ಹಾಗೂ ದಿ.ಪಟ್ಲಕೆರೆ ನಾರಾಯಣಶಾಂತಿ ಅವರ ಸ್ಮರಣಾರ್ಥ ಸುಮಾರು ಐದು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ಸಭಾಂಗಣಕ್ಕೆ ಶಿಲಾನ್ಯಾಸವನ್ನು ನೆರವೇರಿಸಲಾಗುವುದು ಎಂದರು.

ಸಂಜೆ 4ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕಬಡ್ಡಿ ಪಂದ್ಯಾಟವನ್ನು ಉದ್ಘಾಟಿಸಲಿದ್ದು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಸರಪಾಡಿ ಗ್ರಾಪಂ ಅಧ್ಯಕ್ಷೆ ಲೀಲಾವತಿ, ಮಾಜಿ ಸಚಿವ ನಾಗರಾಜ ಶೆಟ್ಟಿ ಮೊದಲಾದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದ ಅವರು, ಈ ಸಂದರ್ಭ ಸಂಘದ ಏಳಿಗೆಗೆ ಶ್ರಮಿಸಿದ ಮಾಜಿ ಕಾರ್ಯದರ್ಶಿ, ಹಿರಿಯರಾದ ಜಾರಪ್ಪ ಶೆಟ್ಟಿ ಖಂಡಿಗ ಅವರನ್ನು ಸನ್ಮಾನಿಸಲಾಗುವುದು ಮತ್ತು ನಟ ರವಿ ಸಾಲಿಯಾನ್, ರಾಷ್ಟ್ರಮಟ್ಟದ ಕಬಡ್ಡಿ ಪಟು ಸುಶ್ಮಿತಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು.

ಈ ಪಂದ್ಯಾಟದಲ್ಲಿ ಅಮೆಚೂರು ಎಸೋಸಿಯೇಶನ್ ನಲ್ಲಿ ನೋಂದಾಯಿಸಲ್ಪಟ್ಟ ಬಲಿಷ್ಠ 24 ತಂಡಗಳು ಭಾಗವಹಿಸಲಿದ್ದು, ಅಮೆಚೂರು ಅಸೋಸಿಯೇಶನ್ ಕಬಡ್ಡಿ ಪಂದ್ಯಾಟದಲ್ಲಿ ತಂದಿರುವ ಕೆಲ ಬದಲಾವಣೆಗಳು ಈ ಪಂದ್ಯಾಟದಿಂದಲೇ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದರು.

62ನೆ ವರ್ಷದ ಸಂಭ್ರಮ

ಗ್ರಾಮೀಣ ಪ್ರದೇಶದ ಸರಪಾಡಿಯಲ್ಲಿ 1956ರಲ್ಲಿ ಸ್ಥಾಪನೆಯಾದ ಯುವಕಮಂಡಲಕ್ಕೆ ಪ್ರಸ್ತುತ 62ನೆ ವರ್ಷದ ಸಂಭ್ರಮದಲ್ಲಿದೆ. ಯುವಕ ಮಂಡಲದಿಂದ ಕಬಡ್ಡಿ ಪಂದ್ಯಾಟವಲ್ಲದೆ ವೈದ್ಯಕೀಯ, ರಕ್ತದಾನ ನಾಯಕತ್ವದಂತಹ ಶಿಬಿರಗಳು, ಭಜನೆ ಸಹಿತ ಧಾರ್ಮಿಕ, ಸಾಮಾಜಿಕ ಚಟುವಟಿಕೆಯಂತ ಜನಪರ ಕಾರ್ಯಕ್ರಮಗಳಲ್ಲಿಯು ಸಕ್ರಿಯವಾಗಿ ತೊಡಗಿಸಿಕೊಂಡು ಜಿಲ್ಲೆಗೆ ಮಾದರಿ ಯುವಕ ಮಂಡಲವಾಗಿ ಗುರುತಿಸಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವಕ ಮಂಡಲದ ಅಧ್ಯಕ್ಷ ಸಂತೋಷ ಕುಮಾರ್ ಶೆಟ್ಟಿ, ಪದಾಧಿಕಾರಿಗಳಾದ ಪ್ರಕಾಶ್ಚಂದ್ರ ಆಳ್ವ, ಕಿಶನ್ ಸರಪಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X