Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಕ್ಯಾ ನೀರಿನ ಸಮಸ್ಯೆ ನೀಗಿಸಲು ಶಾಶ್ವತ...

ಲಕ್ಯಾ ನೀರಿನ ಸಮಸ್ಯೆ ನೀಗಿಸಲು ಶಾಶ್ವತ ಯೋಜನೆ ಜಾರಿಗೆ ಕ್ರಮ: ಚಿಕ್ಕಮಗಳೂರು ಜಿಪಂ ಸಿಇಒ ಸತ್ಯಭಾಮ

ಜನಸಂಪರ್ಕ ಸಭೆ

ವಾರ್ತಾಭಾರತಿವಾರ್ತಾಭಾರತಿ30 Nov 2018 11:21 PM IST
share
ಲಕ್ಯಾ ನೀರಿನ ಸಮಸ್ಯೆ ನೀಗಿಸಲು ಶಾಶ್ವತ ಯೋಜನೆ ಜಾರಿಗೆ ಕ್ರಮ: ಚಿಕ್ಕಮಗಳೂರು ಜಿಪಂ ಸಿಇಒ ಸತ್ಯಭಾಮ

ಚಿಕ್ಕಮಗಳೂರು, ನ.30: ಜಿಲ್ಲೆಯ ಕಡೂರು ಬರ ಪೀಡಿತ ತಾಲೂಕೆಂದು ಸರಕಾರ ಘೋಷಿಸಿದೆ. ಆದರೆ ಪ್ರವಾಹ ಪೀಡಿತ ತಾಲೂಕಾಗಿರುವ ಚಿಕ್ಕಮಗಳೂರಿನ ಲಕ್ಯಾ ಹೋಬಳಿಯೂ ಬರ ಪೀಡಿತ ಹೋಬಳಿಯಾಗಿದೆ. ಲಕ್ಯಾ ಹೋಬಳಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯೇ ದೊಡ್ಡದಾಗಿದ್ದು, ಇಲ್ಲಿನ ನೀರಾವರಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರಕಾರದ ವಿಶೇಷ ಯೋಜನೆಗಳ ಜಾರಿಗೆ ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಪ್ರಾಮಾಣಿಕವಾಗಿ ಜಾರಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಜಿಪಂ ಸಿಇಒ ಸತ್ಯಭಾಮ ತಿಳಿಸಿದ್ದಾರೆ. 

ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನ ಲಕ್ಯಾ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಲಕ್ಯಾ ಹೋಬಳಿ ವ್ಯಾಪ್ತಿಯ ಜನಸಂಪರ್ಕ ಸಭೆಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ಇಲ್ಲಿನ ನೀರಾವರಿ ಸಮಸ್ಯೆ ಬಗೆಹರಿಸುವ ಯೋಜನೆಗಳ ಜಾರಿ ಜಿಲ್ಲಾ ಪಂಚಾಯತ್ ಹಂತ ಮೀರಿದ್ದಾಗಿದೆ. ಇದಕ್ಕೆ ಸರಕಾರವೇ ಶಾಶ್ವತ ಯೋಜನೆ ಜಾರಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಲಕ್ಯಾ ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳ ನೀರಿನ ಸಮಸ್ಯೆಯನ್ನು ಇತ್ತೀಚೆಗೆ ಸಿಎಂ ಜತೆ ನಡೆದ ಸಭೆಯ ಗಮನಕ್ಕೆ ತಂದಿದ್ದೇನೆ ಎಂದರು.

ಬರ ಇರುವ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಿಎಂ ಸೂಚಿಸಿದ್ದಾರೆ. ಇಲ್ಲಿನ ನೀರಿನ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಭದ್ರ ಡ್ಯಾಮ್‍ನಿಂದ ಪೈಪ್‍ಲೈನ್ ಮೂಲಕ ನೀರು ಪೂರೈಸುವ ಯೋಜನೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದ್ದು, ಈ ಯೋಜನೆ ಜಾರಿ ಸಾಧ್ಯವಿದ್ದಲ್ಲಿ 2020ರೊಳಗೆ ಈ ಸಂಬಂಧ ಶೀಘ್ರ ಸಾಧಕ ಬಾದಕಗಳ ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಪೈಪ್‍ಲೈನ್ ಮೂಲಕ ನೀರು ಸರಬರಾಜು ಮಾಡಲು ಕ್ರಮವಹಿಸಲು ಪ್ರಯತ್ನಿಸಲಾಗುವುದು ಎಂದರು. 

ಲಕ್ಯಾ ಗ್ರಾಪಂ ವ್ಯಾಪ್ತಿಯಲ್ಲಿ ಅಂಬೇಡ್ಕರ್ ವಸತಿ ಯೋಜನೆಗೆ ಸರಕರದಿಂದ ಹಣ ಬಿಡುಗಡೆಯಾಗದ ಕಾರಣ ಯೋಜನೆ ಪೂರ್ಣಗೊಂಡಿಲ್ಲ. ಈ ಸಂಬಂಧ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದ ಅವರು, ಬರ ಪೀಡಿತ ಗ್ರಾಮಗಳಲ್ಲಿ ನರೇಗಾ ಯೋಜನೆಯ ಸಮರ್ಪಕ ಜಾರಿಗೆ ಸರಕಾರ ಸೂಚಿಸಿದ್ದು, ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ನಂತರ ನಡೆದ ಸಭೆಯಲ್ಲಿ ಲಕ್ಯಾ ಗ್ರಾಪಂ ಅಧ್ಯಕ್ಷ ಕಾಂತರಾಜ್ ಮಾತನಾಡಿ, ಹೋಬಳಿ ವ್ಯಾಪ್ತಿಯ ಕಣಿವೆಹಳ್ಳಿ, ಲಕ್ಯಾ ಕ್ರಾಸ್ ಮತ್ತಿತರ ಗ್ರಾಮಗಳಲ್ಲಿ ಲೋಕೋಪಯೋಗಿ ಇಲಾಖೆ ರಸ್ತೆಗಳು ಹದಗೆಟ್ಟಿದ್ದು, ಅಪಾಯಕಾರಿ ರಸ್ತೆಗಳಾಗಿ ಪರಿಣಮಿಸಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿವೆ. ಶೀಘ್ರ ದುರಸ್ತಿಯಾಗಬೇಕೆಂದು ಒತ್ತಾಯಿಸಿದ ಅವರು, ಲಕ್ಯಾ ರೈಲ್ವೆ ನಿಲ್ದಾಣದ ಬಳಿ ಲೆವೆಲ್ ಕ್ರಾಸಿಂಗ್ ಇಲ್ಲದಿರುವುದು, ಸ್ಮಶಾನ ಜಾಗ ಮಂಜೂರಾಗದಿರುವುದು, ಕಂದಾಯ-ಅರಣ್ಯ ಭೂಮಿ ಸಮಸ್ಯೆ, ಎಂಎಸ್‍ಎಸ್ ಸ್ಥಾವರ ಸ್ಥಾಪನೆಗೆ ಜಾಗ ನೀಡದಿರುವುದು, ರೈಲ್ವೆ ಜಾಗದಲ್ಲಿ ಕಾಲುವೆ ನಿರ್ಮಾಣಕ್ಕೆ ಅನುಮತಿ, ವಿಧವಾ, ವೃದ್ಧಪ್ಯಾ ವೇತನ ಸಮಸ್ಯೆ, ಹಳೇ ಗ್ರಾಪಂ ಕಟ್ಟಡದಲ್ಲಿ ಆರೋಗ್ಯ ಕೇಂದ್ರ ನಿರ್ಮಾಣ ಮತ್ತಿತರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಮನವಿ ಮಾಡಿದರು.

ಬಳಿಕ ವಿವಿಧ ಗ್ರಾಮಗಳ ರೈತರು, ನಾಗರಿಕರು ವಿವಿಧ ಇಲಾಖಾ ಸಮಸ್ಯೆಗಳ ಬಗ್ಗೆ ಸಭೆಯ ಗಮನಸೆಳೆದರು. ಕೆಲ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಒದಗಿಸಿದರೆ, ಇನ್ನು ಕೆಲ ದೂರುಗಳ ಬಗ್ಗೆ 40 ದಿನಗಳ ಒಳಗೆ ಪರಿಹಾರ ಸೂಚಿಸುವ ಭರವಸೆ ನೀಡಲಾಯಿತು.

ಶಾಸಕ ಸಿ.ಟಿ.ರವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಭೆಯಲ್ಲಿ ಎಡಿಸಿ ಶಿವಕುಮಾರ್, ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ಉಪಾಧ್ಯಕ್ಷ ಆನಂದಪ್ಪ, ತಾಪಂ ಅಧ್ಯಕ್ಷ ಜಯಣ್ಣ, ಉಪಾಧ್ಯಕ್ಷ ರಮೇಶ್, ಜಿಪಂ ಸದಸ್ಯರಾದ ಬೆಳವಾಡಿ ರವೀಂದ್ರ, ಸೋಮಶೇಖರ್, ತಹಶೀಲ್ದಾರ್ ರಾಜಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ 10 ಗ್ರಾಪಂಗಳ ಅಧ್ಯಕ್ಷ, ಉಪಾಧ್ಯಕ್ಷರು, ಪಿಡಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

ಬರ ಪೀಡಿತ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಿರುವ ಟ್ಯಾಂಕರ್ ಮಾಲಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿದಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು. ಈ ವರ್ಷ ಬರ ಪೀಡಿತ ಗ್ರಾಮಗಳಿಗೆ ಟ್ಯಾಂಕರ್ ನೀರು ಪೂರೈಕೆ ಮಾಡಿದ ಬಿಲ್ ಸುಮಾರು 5 ಕೋ. ರೂ. ಬಾಕಿ ಇದೆ. ಈ ಸಂಬಂಧ ಸಿಇಒ ಆಡಿಟ್ ನಡೆದಿದ್ದು, ಟ್ಯಾಂಕರ್ ಮಾಲಕರು ಸರಕಾರ ಕೇಳಿರುವ ದಾಖಲೆಗಳನ್ನು ಸಲ್ಲಿಸಿದಲ್ಲಿ ಹಣ ಬಿಡುಗಡೆಯಾಗಲಿದೆ. ಈ ಬಾರಿ ಮತ್ತೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವ ಅನಿವಾರ್ಯತೆ ಇದ್ದಲ್ಲಿ ಈ ಸಂಬಂಧ ಗ್ರಾಪಂ ನಿರ್ಣಯಕೈಗೊಂಡು ಅದನ್ನು ಜಿಲ್ಲಾಧಿಕಾರಿಗೆ ಕಳುಹಿಸಿಕೊಡಬೇಕು. ಜಿಲ್ಲಾಧಿಕಾರಿಗಳು ಇದನ್ನು ಪರಿಶೀಲಿಸಿ ಟ್ಯಾಂಕರ್ ನೀರು ಪೂರೈಕೆ ಮಾಡಲು ಅನುಮತಿ ನೀಡಲಿದ್ದಾರೆ. ಗುತ್ತಿಗೆದಾರರು ಸಮರ್ಪಕ ದಾಖಲೆಗಳೂ ಸೇರಿದಂತೆ15 ದಿನಗಳಿಗೊಮ್ಮೆ ಬಿಲ್ ನೀಡಿದಲ್ಲಿ ಹಣ ಬಿಡುಗಡೆಯಾಗಲಿದೆ.

- ಸತ್ಯಭಾಮ, ಸಿಇಒ

ಜನರ ಬಳಿಗೆ ಸರಕಾರ ಎಂಬ ಕಲ್ಪನೆಯಡಿಯಲ್ಲಿ ಜನಸಂಪರ್ಕ ಸಭೆಗಳನ್ನು ಸರಕಾರ ನಡೆಸುತ್ತಿದೆ. ದೋರನಾಳೂ, ಕೊಪ್ಪ, ಜಯಪುರ, ಪಂಚನಹಳ್ಳಿ ಸಭೆಗಳಲ್ಲಿ ಶೇ.90ರಷ್ಟು ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರಕಾರ ಯಶಸ್ವಿಯಾಗಿದೆ. ಇಂತಹ ಸಭೆಗಳ ಪ್ರಯೋಜನವನ್ನು ಗ್ರಾಮಗಳ ಜನರು ಸದುಪಯೋಗಪಡಿಸಿಕೊಳ್ಳಬೇಕು.
- ಸುಜಾತಾ ಕೃಷ್ಣಪ್ಪ, ಜಿಪಂ ಅಧ್ಯಕ್ಷೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X