Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕುಸ್ತಿಯಲ್ಲೂ ಗುತ್ತಿಗೆ ಪದ್ಧತಿ

ಕುಸ್ತಿಯಲ್ಲೂ ಗುತ್ತಿಗೆ ಪದ್ಧತಿ

ಬಜರಂಗ್, ವಿನೇಶ್, ಪೂಜಾಗೆ ‘ಎ’, ಸುಶೀಲ್, ಸಾಕ್ಷಿಗೆ ‘ಬಿ’ ಶ್ರೇಣಿ

ವಾರ್ತಾಭಾರತಿವಾರ್ತಾಭಾರತಿ30 Nov 2018 11:36 PM IST
share
ಕುಸ್ತಿಯಲ್ಲೂ ಗುತ್ತಿಗೆ ಪದ್ಧತಿ

ಹೊಸದಲ್ಲಿ, ನ.30: ಭಾರತದ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ಶುಕ್ರವಾರ ಕುಸ್ತಿಪಟುಗಳಿಗೆ ಎ, ಬಿ, ಸಿ ಹಾಗೂ ಡಿ ಶ್ರೇಣಿಯ ಗುತ್ತಿಗೆ ಪದ್ಧತಿ ಜಾರಿ ಮಾಡುವ ಮೂಲಕ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ. ಸ್ಟಾರ್ ಕುಸ್ತಿಪಟುಗಳಾದ ಬಜರಂಗ್ ಪೂನಿಯ ಹಾಗೂ ವಿನೇಶ್ ಫೋಗಟ್ ಜೊತೆಗೆ ಪೂಜಾ ಧಾಂಡಾ ‘ಎ’ ಶ್ರೇಣಿಯಲ್ಲಿ ಸ್ಥಾನ ಪಡೆದಿದ್ದಾರೆ. ‘ಎ’ ಶ್ರೇಣಿಯ ಕುಸ್ತಿಪಟುಗಳು ವರ್ಷಕ್ಕೆ 30 ಲಕ್ಷ ರೂ. ಸಂಭಾವನೆ ಪಡೆಯಲಿದ್ದಾರೆ.

ಈ ವರ್ಷ ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ಬಜರಂಗ್ ಹಾಗೂ ವಿನೇಶ್‌ಗೆ ನಿರೀಕ್ಷೆಯಂತೆಯೇ ‘ಎ’ ಶ್ರೇಣಿ ನೀಡಲಾಗಿದೆ. ಇತ್ತೀಚೆಗೆ ಕೊನೆಗೊಂಡ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪೂಜಾ ಪದಕ ಜಯಿಸಿರುವ ಭಾರತದ ನಾಲ್ಕನೇ ಕುಸ್ತಿತಾರೆ ಎನಿಸಿಕೊಂಡಿದ್ದರು.

ಕಳಪೆ ಫಾರ್ಮ್‌ನಲ್ಲಿರುವ ಎರಡು ಬಾರಿಯ ಒಲಿಂಪಿಕ್ಸ್ ಚಾಂಪಿಯನ್ ಸುಶೀಲ್ ಕುಮಾರ್ ಹಾಗೂ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ‘ಎ’ ಶ್ರೇಣಿಯಲ್ಲಿ ಸ್ಥಾನ ಪಡೆಯಲು ವಿಫಲರಾದರು.

ಈ ಇಬ್ಬರು ಕುಸ್ತಿಪಟುಗಳು ‘ಬಿ’ ಶ್ರೇಣಿ ಪಡೆದಿದ್ದಾರೆ. ‘ಬಿ’ ಶ್ರೇಣಿಯ ಕುಸ್ತಿಪಟುಗಳು ವಾರ್ಷಿಕ 20 ಲಕ್ಷ ರೂ. ಸ್ವೀಕರಿಸಲಿದ್ದಾರೆ. ಒಂದು ವರ್ಷದ ಬಳಿಕ ಒಪ್ಪಂದ ನವೀಕರಿಸಲಾಗುತ್ತದೆ.

 ‘ಸಿ’ ಶ್ರೇಣಿಯ ಕುಸ್ತಿಪಟುಗಳು ವರ್ಷಕ್ಕೆ 10 ಲಕ್ಷ ರೂ. ಪಡೆಯಲಿದ್ದು, ಸಿ ಶ್ರೇಣಿಯಲ್ಲಿ ಸಂದೀಪ್ ಥೋಮರ್, ಗ್ರೀಕೊ ರೋಮನ್ ಕುಸ್ತಿಪಟು ಸಾಜನ್ ಭನ್ವಾಲ್, ವಿನೋದ್ ಓಂ ಪ್ರಕಾಶ್, ರಿತು ಫೋಗಟ್, ಸುಮಿತ್ ಮಲಿಕ್, ದೀಪಕ್ ಪೂನಿಯಾ ಹಾಗೂ ದಿವ್ಯಾ ಕಕ್ರಾನ್ ಅವರಿದ್ದಾರೆ.

‘ಡಿ’ ಶ್ರೇಣಿಯಲ್ಲಿರುವ ಕುಸ್ತಿಪಟುಗಳಿಗೆ ವಾರ್ಷಿಕ 5 ಲಕ್ಷ ರೂ. ನೀಡಲಾಗುತ್ತದೆ. ರಾಹುಲ್ ಅವಾರೆ, ನವೀನ್, ಸಚಿನ್ ರಥಿ, ಗ್ರೀಕೊ ರೊಮನ್ ವಿಜಯ್, ರವಿ ಕುಮಾರ್, ಸಿಮ್ರನ್, ಮಾನ್ಸಿ ಹಾಗೂ ಅಂಶು ಮಲಿಕ್ ಅವರಿದ್ದಾರೆ.

ಇಲ್ಲಿನ ನಂದಿನಿ ನಗರದಲ್ಲಿ ಹಿರಿಯರ ರಾಷ್ಟ್ರಿಯ ಕುಸ್ತಿ ಚಾಂಪಿಯನ್‌ಶಿಪ್‌ನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಡಬ್ಲುಎಫ್‌ಐ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಕುಸ್ತಿಪಟುಗಳ ಒಪ್ಪಂದ ಪಟ್ಟಿಯನ್ನು ಘೋಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X