ಬೆಳ್ತಂಗಡಿ: ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಮೃತ್ಯು

ಬೆಳ್ತಂಗಡಿ, ಡಿ. 1: ಲಾಯ್ಲ ಸಮೀಪದ ಓಡದಕರಿಯ ದೇವಸ್ಥಾನದ ಬಳಿಯ ತೋಟದಲ್ಲಿ ಅಡಿಕೆ ಕೀಳುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಕಣ್ಣಾಜೆಬೈಲ್ ನಿವಾಸಿ ಯೋಗೀಶ್ (34) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯೋಗೀಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.
Next Story