Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಧರ್ಮ ಗುರುಗಳು ಪರಿಸರ ಸಂರಕ್ಷಣೆಗಾಗಿ...

ಧರ್ಮ ಗುರುಗಳು ಪರಿಸರ ಸಂರಕ್ಷಣೆಗಾಗಿ ಮುಂಚೂಣಿಗೆ ಬರಬೇಕು: ಬಿ.ಎಲ್.ಶಂಕರ್

ನದಿಗಳನ್ನು ಉಳಿಸೋಣ ಬನ್ನಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Dec 2018 8:13 PM IST
share
ಧರ್ಮ ಗುರುಗಳು ಪರಿಸರ ಸಂರಕ್ಷಣೆಗಾಗಿ ಮುಂಚೂಣಿಗೆ ಬರಬೇಕು: ಬಿ.ಎಲ್.ಶಂಕರ್

ಬೆಂಗಳೂರು, ಡಿ.1: ರಾಜಕೀಯವು ವ್ಯಾಪಾರೀಕರಣಕ್ಕೆ ತುತ್ತಾಗಿದ್ದು, ಅದರ ಪುನರ್ ವ್ಯಾಖ್ಯಾನ ನಡೆಯಬೇಕಿದೆ. ನದಿ ಮೂಲಗಳನ್ನು ಉಳಿಸಬೇಕಾಗಿದೆ. ಇಲ್ಲವಾದಲ್ಲಿ ಮಲೆನಾಡಿನ ನದಿಗಳು ಬಯಲುಸೀಮೆಯ ನದಿಗಳಂತೆ ಬತ್ತಲಿವೆ. ಹೀಗಾಗಿ ಧರ್ಮ ಗುರುಗಳು ಪರಿಸರ ಸಂರಕ್ಷಣೆಗೆ ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಕರ್ನಾಟಕ ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್.ಶಂಕರ್ ಹೇಳಿದರು.

ಶನಿವಾರ ಗ್ರಾಮ ಸೇವಾ ಸಂಘವು ನಗರದ ಗಾಂಧಿ ಭವನದಲ್ಲಿ ವಿಜ್ಞಾನಿ ಸಂತ ಜಿ.ಡಿ ಅಗರವಾಲರ ಸ್ಮರಣಾರ್ಥ ಆಯೋಜಿಸಿದ್ದ ನದಿಗಳನ್ನು ಉಳಿಸೋಣ ಬನ್ನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ ಐವತ್ತು ವರ್ಷದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ನದಿಗಳು ಕಲುಷಿತವಾಗಿದೆ. ಕೃಷಿಯಲ್ಲಿ ಬಳಕೆಯಾಗುವ ಕ್ರಿಮಿನಾಶಕ ಇಂದು ಮಲೆನಾಡಿಗೆ ಮಾರಕವಾಗಿದೆ. ಮಲೆನಾಡಿನ ಕಾಡುಗಳಲ್ಲಿ ಸ್ಥಳೀಯ ಮರಗಳನ್ನು ಮೂಲೆ ಗುಂಪು ಮಾಡಿ ಕೇವಲ ಲಾಭದಾಯಕ ಮರಗಳನ್ನು ಬೆಳೆಸಿ ಕಾಡನ್ನು ಹಾಳು ಮಾಡುವ ಕೆಲಸವನ್ನು ಅರಣ್ಯ ಇಲಾಖೆಯೇ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯಸಭಾ ಸದಸ್ಯ ಪ್ರೊ.ಎಂ.ವಿ ರಾಜೀವ್ ಗೌಡ ಮಾತನಾಡಿ, ಅಕ್ರಮ ಮರಳು ಗಣಿಗಾರಿಕೆ ಪರಿಸರಕ್ಕೆ ಮಾರಕವಾಗಿದ್ದು, ಅದು ಮೊದಲು ನಿಲ್ಲಬೇಕಾಗಿದೆ. ಮರಳು ಗಣಿಗಾರಿಕೆಯಿಂದಾಗಿ ಮರಳು ಮೂಲಗಳು ನಾಶವಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾವೇರಿ ಉಗಮ ಸ್ಥಾನದಲ್ಲೇ ಅಭಿವೃದ್ಧಿ ಹೆಸರಿನಲ್ಲಿ ರೈಲ್ವೇ ಹಳಿಗಳನ್ನು ನಿರ್ಮಾಣ ಮಾಡುವ ಕೆಲಸಕ್ಕೆ ಕೈ ಹಾಕಿ ಕಾಡನ್ನು ನಾಶ ಮಾಡುತ್ತಿದ್ದೇವೆ. ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ನೋಡುತ್ತಿದ್ದೇವೆ ಹಾಗೂ ವೃಷಭಾವತಿಯಲ್ಲಿರುವ ರಾಸಾಯನಿಕಗಳು ಭಯ ಹುಟ್ಟಿಸುತ್ತದೆ. ಆ ನೀರಿನಲ್ಲಿ ಬೆಳೆಯುವ ತರಕಾರಿಯನ್ನು ಬೆಳೆದು ತಿನ್ನುತ್ತಿದ್ದೇವೆ. ಈ ದುಷ್ಪರಿಣಾಗಳ ಬಗ್ಗೆ ಎಲ್ಲರೂ ಜಾಣ ಕುರುಡರಂತೆ ವರ್ತಿಸುತ್ತಿದ್ದೇವೆಂದು ಅವರು ವಿಷಾದಿಸಿದರು.

ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಮಾತನಾಡಿ, ಸರಳ ಜೀವನ ಮತ್ತು ಉನ್ನತ ಚಿಂತನೆ ಪರಿಸರವನ್ನು ಉಳಿಸುತ್ತದೆ. ಹಿರಿಯರು ಪ್ರಕೃತಿಯನ್ನು ದೇವರಂತೆ ನೋಡುತ್ತಿದ್ದರು, ಇಂದು ಅದು ಸಂಪತ್ತಾಗಿದೆ. ಇವತ್ತು ವಿಜ್ಞಾನಕ್ಕೂ ಧರ್ಮಕ್ಕೂ ಸಂಬಂಧ ಕಳಚಿಕೊಂಡಿದೆ. ಆದರೆ, ಇವು ಒಂದೇ ನಾಣ್ಯದ ಎರಡು ಮುಖಗಳು. ವಿಜ್ಞಾನ ಹಾಗೂ ಧರ್ಮ ಒಂದಾದರೆ ಸಮಾಜದಲ್ಲಿ ಬದಲಾವಣೆ ತರಬಹುದು ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಪ್ರಸನ್ನ ಪ್ರಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಬಸವರಾಜ್ ಪಾಟೀಲ್, ನೀರಿನ ತಜ್ಞ ವಿಶ್ವನಾಥ, ಲೋಕವಿದ್ಯಾ ಕಾರ್ಯಕರ್ತ ಅಭಿಜಿತ್ ಮಿತ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಡಾ ವೂಡೇ ಪಿ. ಕೃಷ್ಣ, ಪರಿಸರ ತಜ್ಞ ಸಿ. ಯತಿರಾಜು ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X