Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಬ್ಬರ್ಯನನ್ನು ಬಬ್ರುವಾಹನನ ಅವತಾರ...

ಬಬ್ಬರ್ಯನನ್ನು ಬಬ್ರುವಾಹನನ ಅವತಾರ ಎನ್ನುವ ಕಾಲವಿದು: ಜಾನಪದ ವಿದ್ವಾಂಸ ಪುರುಷೋತ್ತಮ ಬಿಳಿಮಲೆ ಖೇದ

ಜನನುಡಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Dec 2018 9:47 PM IST
share
ಬಬ್ಬರ್ಯನನ್ನು ಬಬ್ರುವಾಹನನ ಅವತಾರ ಎನ್ನುವ ಕಾಲವಿದು: ಜಾನಪದ ವಿದ್ವಾಂಸ ಪುರುಷೋತ್ತಮ ಬಿಳಿಮಲೆ ಖೇದ

ಮಂಗಳೂರು, ಡಿ.1: ಇಂದು ತುಳುನಾಡಿನ ದೈವವಾದ ಬಬ್ಬರ್ಯನನ್ನು ಬಬ್ರುವಾಹನನ ಅವತಾರ ಎಂದು ಸುದ್ದಿ ಹಬ್ಬಿಸಲಾಗಿದೆ. ರಾಮಾಯಣದ ಬಗ್ಗೆ ಮಾತನಾಡಿದರೆ ತಮ್ಮ ಭಾವನೆಗಳಿಗೆ ಧಕ್ಕೆಯಾಯಿತು ಎನ್ನುವುದಾದರೆ, ಬಬ್ಬರ್ಯನ ಇತಿಹಾಸವನ್ನು ತಿರುಚಿದರೆ ನಮಗೆ ನೋವಾಗುವುದಿಲ್ಲವೇ ? ಎಂದು ಖ್ಯಾತ ಜಾನಪದ ವಿದ್ವಾಂಸರಾದ ಪುರುಷೋತ್ತಮ ಬಿಳಿಮಲೆ ಪ್ರಶ್ನಿಸಿದ್ದಾರೆ.

ನಗರದ ಶಾಂತಿಕಿರಣ ಸಭಾಂಗಣದಲ್ಲಿ ಇಂದು ಜನನುಡಿಯ ‘ಭವಿಷ್ಯದ ಭಾರತ: ಮಾಕ್ಸ್- ಅಂಬೇಡ್ಕರ್- ಗಾಂಧಿ- ಲೋಹಿಯಾ’ ಎಂಬ ವಿಷಯದ ಗೋಷ್ಠಿಯಲ್ಲಿ ಅಂಬೇಡ್ಕರ್ ವಿಚಾರಧಾರೆ ಕುರಿತು ಅವರು ಮಾತನಾಡಿದರು.

ಇಂದು ಕರಾವಳಿಯಲ್ಲಿ ಯಕ್ಷಗಾನ ಕೂಡ ದಾರಿತಪ್ಪಿದೆ. ರಾಮ ವಿಜಯ ಎನ್ನುವುದು ರಾವಣ ವಧೆ, ವಾಲಿವಧೆ ಎಂದು ನೆಗೆಟಿವ್ ಶೀರ್ಷಿಕೆಗಳಿಂದ ಗುರುತಿಸಲ್ಪಡುತ್ತಿದೆ. ಅದಕ್ಕೆ ಕರಾವಳಿಯಲ್ಲಿ ಖಳರಿಗೆ ಮಣೆ ಹಾಕುತ್ತಿರುವುದೇ ಕಾರಣ ಎಂದು ಬಿಳಿಮಲೆಯವರು ಹೇಳಿದರು.

ಲಕ್ಷಾಂತರ ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಮೌನವಾಗಿರುವಾಗ, ರೈತರು ನ್ಯಾಯಕ್ಕಾಗಿ ಪ್ರತಿಭಟಿಸುವುದಕ್ಕೆ ಅಧಿಕಾರದಲ್ಲಿರುವ ಯಾರೊಬ್ಬರೂ ಪ್ರತಿಕ್ರಿಯಿಸದಿರುವಾಗ ನೋವಾಗುತ್ತದೆ ಎಂದು ಹೇಳಿದ ಅವರು, ಪರಿಸ್ಥಿತಿ ಹೀಗಾದರೆ ವರ್ತಮಾನದ ಭಾರತದ ಅಪಾಯದ ಬಗ್ಗೆ ಆತಂಕವಾಗುತ್ತದೆ ಎಂದರು.

ಧರ್ಮವನ್ನು ಒಪ್ಪಿಕೊಂಡು ಅದರಲ್ಲಿನ ಹುಳುಕುಗಳನ್ನು ಪ್ರಶ್ನೆ ಮಾಡಬೇಕು ಎನ್ನುವುದು ಅಂಬೇಡ್ಕರ್ ವಾದ. ಆ ನಿಟ್ಟಿನಲ್ಲಿ ನೋಡುವುದಾದರೆ, ಎಲ್ಲ ಹಿಂದೂಗಳು ಒಂದು ಎನ್ನುವರನ್ನು ನಾವು ಪ್ರಶ್ನಿಸಬಹುದು ಎಂದರು.

ಗೋಷ್ಠಿಯಲ್ಲಿ ಮುಝಾಫರ್ ಅಸ್ಸಾದಿ ಅವರು ಗಾಂಧಿಯ ಬಗ್ಗೆ ಮಾತನಾಡುತ್ತಾ, ಮಹಾತ್ಮನ ಕುರಿತಾದ ನಂಬಿಕೆ ಹೇಗೆ ಕಾಲಕಾಲಕ್ಕೆ ಬದಲಾಗಿದೆ ಎ್ನುವುದನ್ನು ವಿವರಿಸಿದರು. ಸ್ವಾತಂತ್ರ ಹೋರಾಟದ ಸಂದರ್ಭದಲ್ಲಿ ಶಾಂತಿ, ಅಹಿಂಸೆಯ ಪ್ರತೀಕವಾಗಿದ್ದ ಗಾಂಧಿ ಇಂದು, ಬಣ್ಣದ ನೋಟುಗಳ ಸಂಕೇತವಾಗಿದ್ದಾರೆ. ಕಲ್ಪಿತ ಗಾಂಧಿಯಾಗಿ, ನೆನಪಾಗುವ ಗಾಂಧಿಯಾಗಿ ಸೀಮಿತಗೊಳ್ಳುತ್ತಾ ಇಂದು ಗಾಂಧಿ ತತ್ವಗಳು ನಗಣ್ಯವಾಗುತ್ತಿವೆ. ಮುಂದೆ ಗಾಂಧಿ ಹಿಂದುತ್ವದ ಗಾಂಧಿ ಆಗುವ ಆತಂಕವನ್ನು ಅಲ್ಲಗಳೆಯಲಾಗದು ಎಂದು ಮುಝಾಫರ್ ಅಸ್ಸಾದಿ ವಿಷಾದಿಸಿದರು.

ಇಂತಹ ವ್ಯವಸ್ಥೆಯಲ್ಲಿ ಗಾಂಧಿ, ಅಂಬೇಡ್ಕರ್, ನೆಹರೂ ಮಾಕ್ಸ್, ಮೌಲಾನಾ ಆಝಾದ್‌ ಅವರ ಚಿಂತನೆಗಳನ್ನು ಒಳಗೊಂಡ ಹೊಸ ತತ್ವ ಭವಿಷ್ಯದ ಭಾರತಕ್ಕೆ ಸಹಕಾರಿಯಾಗಬಲ್ಲದು ಎಂದು ಅವರು ಆಶಿಸಿದರು. ಶ್ರುತಿ ನೆಲಮಾಕಹಳ್ಳಿ ಗೋಷ್ಠಿಯನ್ನು ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X