ಬಂಟ್ವಾಳ ಎಎಸ್ಸೈ ರಘುರಾಮ್ ಹೆಗ್ಡೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು
ಅತ್ಯಾಚಾರ ಪ್ರಕರಣದಲ್ಲಿ ಕರ್ತವ್ಯ ಲೋಪ

ಬಂಟ್ವಾಳ, ಡಿ. 1: ಮಂಗಳೂರಿನಲ್ಲಿ ನಡೆದ ಅತ್ಯಾಚಾರ ಸಂತ್ರಸ್ತೆಯ ದೂರು ದಾಖಲಿಸದೆ ಕರ್ತವ್ಯ ಲೋಪ ಎಸಗಿರುವ ಆರೋಪದಡಿ ಬಂಟ್ವಾಳ ಎಎಸ್ಸೈ ರಘುರಾಮ್ ಹೆಗ್ಡೆ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ತಿಳಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲ ಗ್ರಾಮದ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ನ. 20ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ, ಠಾಣಾ ಪ್ರಭಾರ ಕರ್ತವ್ಯದಲ್ಲಿದ ಎಎಸ್ಸೈ ರಘುರಾಮ್ ಹೆಗ್ಡೆ ದೂರು ದಾಖಲಿಸದೇ ಹಾಗೂ ಮೇಲಾಧಿಕಾರಿಗಳಿಗೂ ಮಾಹಿತಿ ತಿಳಿಸಿರುವುದಿಲ್ಲ. ಅದಲ್ಲದೆ, ಸಂಬಂಧಪಟ್ಟ ಪೊಲೀಸ್ ಠಾಣೆಗೆ ಕೂಡ ಮಾಹಿತಿ ನೀಡದೇ ಹಾಗೂ ಸಂಬಂದಪಟ್ಟ ಠಾಣೆಗೆ ಸಿಬ್ಬಂದಿಯೊಂದಿಗೆ ಕಳುಹಿಸಿ ಕೋಡದೇ ಠಾಣಾ ಪ್ರಭಾರ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಹಾಗೂ ಕರ್ತವ್ಯ ಲೋಪ ಎಸಗಿರುತ್ತಾರೆ. ಇದರಿಂದ ನ. 26ರಂದು ವಿಳಂಬವಾಗಿ ದೂರು ದಾಖಲಾದ ಕಾರಣ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ರವಿಕಾಂತೇಗೌಡ ತಿಳಿಸಿದ್ದಾರೆ. ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಎಸ್ಸೈ ರಘುರಾಮ ಹೆಗ್ಡೆ ಅವರನ್ನು ನ. 29ರಂದು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.





