ಡಿ.3: ವಿಶ್ವ ವಿಕಲಚೇತನರ ದಿನಾಚರಣೆ
ಬೆಂಗಳೂರು, ಡಿ.1:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ ವತಿಯಿಂದ ಡಿ.3 ರಂದು ಬೆಳಗ್ಗೆ 11ಕ್ಕೆ ಸ್ವಾತಂತ್ರ ಉದ್ಯಾನವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಶ್ವ ವಿಕಲಚೇತನರ ದಿನಾಚರಣೆ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಕೇಂದ್ರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಹಾಗೂ ಕೇಂದ್ರದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಉಪಸ್ಥಿತರಿರುವರು.
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಬ್ರೈಲ್ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಡಾ.ಜಯಮಾಲ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.
Next Story





