ಮಂಡ್ಯ: ಮರಳು ದಂಧೆ ಕಡಿವಾಣಕ್ಕೆ ಒತ್ತಾಯ; ನೀರಿನ ಟ್ಯಾಂಕ್ ಏರಿ ಪ್ರತಿಭಟನೆ

ಮಂಡ್ಯ, ಡಿ.1: ಶಿಂಷಾನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಮದ್ದೂರಿನ ಶಿವಪುರದ ಸೋಮಣ್ಣ ಎಂಬ ವ್ಯಕ್ತಿ ನೀರಿನ ಟ್ಯಾಂಕ್ ಏರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಮನವಿ ಮಾಡಿದರೆ, ಉಪವಿಭಾಗಾಧಿಕಾರಿ ರಾಜೇಶ್ ಉಡಾಫೆಯಾಗಿ ಮಾತನಾಡುತ್ತಿದ್ದಾರೆ. ಹಾಗಾಗಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಬೇಕು ಎಂದು ಸೋಮಣ್ಣ ಪತ್ರವೊಂದನ್ನು ಬರೆದಿಟ್ಟಿದ್ದಾರೆ.
ಶಿಂಷಾನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದರಿಂದ ಪರಿಸರ ಹಾಳಾಗುತ್ತಿದ್ದು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಭರವಸೆ ನೀಡುವವರೆಗೂ ಟ್ಯಾಂಕ್‍ನಿಂದ ಇಳಿಯುವುದಿಲ್ಲ ಎಂದು ಅವರು ಪಟ್ಟುಹಿಡಿದ್ದಾರೆ ಎಂದು ವರದಿಯಾಗಿದೆ.
Next Story





