ರಾಮಮಂದಿರ ವಿರುದ್ಧದ ಸುಪ್ರೀಂ ಕೋರ್ಟ್ ತೀರ್ಪು ಒಪ್ಪಲ್ಲ: ಮಂಜುನಾಥ ಸ್ವಾಮಿ

ಉಡುಪಿ, ಡಿ.2: ಈ ದೇಶದ ನ್ಯಾಯಾಲಯವು ಬಾಬರಿ ಮಸೀದಿ ಪರ ತೀರ್ಪು ನೀಡಿದರೆ ನಾವು ಒಪ್ಪಲ್ಲ. ದೇಶದ ಸುಪ್ರೀಂ ಕೋರ್ಟ್ ಮಾತ್ರವಲ್ಲ ಅಂತಾರಾಷ್ಟ್ರೀಯ ಕೋರ್ಟ್ ತೀರ್ಪು ನೀಡಿದರೂ ನಾವು ಅದನ್ನು ಒಪ್ಪಲು ಸಾಧ್ಯವಿಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿಯೇ ಸಿದ್ಧ. ಅದಕ್ಕಾಗಿ ನಾವು ಸಿದ್ಧರಾಗಬೇಕಾಗಿದೆ ಎಂದು ವಿಎಚ್ಪಿ ದಕ್ಷಿಣ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ರವಿವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ಹಮ್ಮಿಕೊಳ್ಳಲಾದ ಜನಾಗ್ರಹ ಸಭೆಯನ್ನುದೇಶಿಸಿ ಅವರು ಮಾತನಾಡುತಿದ್ದರು.
450 ವರ್ಷಗಳಿಂದ ರಾಮ ಜನ್ಮ ಭೂಮಿಯಲ್ಲಿ ರಾಮನ ಹುಟ್ಟು, ರಾಮ ಮಂದಿರ ಇದೆಯೇ ಎಂಬುದರ ಬಗ್ಗೆ ನ್ಯಾಯಾಲಯದಲ್ಲಿ ಚರ್ಚೆಗಳನ್ನು ಮಾಡಲಾಗುತ್ತಿದೆ. ಈ ದೇಶದ ನ್ಯಾಯಾಲಯ ಹಾಗೂ ಆ ರೀತಿ ಯೋಚನೆ ಮಾಡುವ ವ್ಯಕ್ತಿಗಳಿಗೆ ನಾಚಿಕೆಯಾಗಬೇಕು ಎಂದು ಕಟುವಾಗಿ ಟೀಕಿಸಿದರು.
Next Story