Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಶ್ಮೀರ: ಹೆತ್ತವರ ಕರೆಗೆ ಓಗೊಟ್ಟು ಉಗ್ರ...

ಕಾಶ್ಮೀರ: ಹೆತ್ತವರ ಕರೆಗೆ ಓಗೊಟ್ಟು ಉಗ್ರ ಸಂಘಟನೆ ತೊರೆದು ಮನೆಗೆ ಮರಳಿದ ವಿದ್ಯಾರ್ಥಿ

ವಾರ್ತಾಭಾರತಿವಾರ್ತಾಭಾರತಿ2 Dec 2018 10:17 PM IST
share
ಕಾಶ್ಮೀರ: ಹೆತ್ತವರ ಕರೆಗೆ ಓಗೊಟ್ಟು ಉಗ್ರ ಸಂಘಟನೆ ತೊರೆದು ಮನೆಗೆ ಮರಳಿದ ವಿದ್ಯಾರ್ಥಿ

ಶ್ರೀನಗರ, ಡಿ.2: ನೋಯ್ಡಾ ಮೂಲದ ವಿವಿಯಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿದ್ದು, ಬಳಿಕ ನಿಷೇಧಿತ ಐಸಿಸ್ ಸಂಘಟನೆ ಸೇರಿದ್ದ ಎನ್ನಲಾದ ಕಾಶ್ಮೀರದ ವಿದ್ಯಾರ್ಥಿಯೊಬ್ಬ ಇದೀಗ ಹೆತ್ತವರ ಕರೆಗೆ ಓಗೊಟ್ಟು ಮನೆಗೆ ಮರಳಿರುವುದಾಗಿ ವರದಿಯಾಗಿದೆ.

ಶ್ರೀನಗರದ ಖನ್ಯಾರ್ ಗ್ರಾಮದ ನಿವಾಸಿ , 20 ವರ್ಷದ ಇಹ್ತೆಶಾಂ ಬಿಲಾಲ್ ಎಂಬಾತ ನೋಯ್ಡಾದ ಶಾರದಾ ವಿವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ. ಆದರೆ ಕಳೆದ ಅಕ್ಟೋಬರ್ ಬಳಿಕ ನಾಪತ್ತೆಯಾಗಿದ್ದ. ಕಳೆದ ತಿಂಗಳು ಬಿಲಾಲ್ ಕಪ್ಪು ಬಣ್ಣದ ಧಿರಿಸು ತೊಟ್ಟು, ಶಸ್ತ್ರ ಮತ್ತು ಐಸಿಸ್ ಧ್ವಜ ಹಿಡಿದುಕೊಂಡಿರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು.

  ಈ ಮಧ್ಯೆ, ಕಾಣೆಯಾಗಿರುವ ತಮ್ಮ ಪುತ್ರನನ್ನು ಹುಡುಕಿಕೊಡುವಂತೆ ಬಿಲಾಲ್‌ನ ಪೋಷಕರು ಪೊಲೀಸರಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಮನೆಗೆ ಮರಳುವಂತೆ ಕುಟುಂಬದ ಸದಸ್ಯರು ಕೈಮುಗಿದು ಬೇಡಿಕೊಳ್ಳುತ್ತಿರುವ ಫೋಟೋ ದಿನಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಹೆತ್ತವರ ಶವಮಂಚಕ್ಕೆ ೆ ಹೆಗಲು ನೀಡಲಾದರೂ ಮರಳಿ ಬಾ ಎಂದು ಭಾವನಾತ್ಮಕವಾಗಿ ಮನವಿ ಮಾಡಿಕೊಂಡಿದ್ದರು. ಅಲ್ಲದೆ ಕುಟುಂಬದ ಏಕೈಕ ಗಂಡು ಸಂತಾನವಾಗಿರುವ ತಮ್ಮ ಮಗನನ್ನು ಮರಳಿ ಕಳಿಸುವಂತೆ ಭಯೋತ್ಪಾದಕ ಸಂಘಟನೆಗಳಿಗೂ ಮನವಿ ಮಾಡಿಕೊಂಡಿದ್ದರು.

“ಸ್ವರ್ಗವು ಹೆತ್ತವರ ಕಾಲಡಿಯಲ್ಲಿದೆ ಎಂದು ಹೇಳುತ್ತಿರುವ ನೀವು, ಇದೀಗ ನನ್ನ ಮಗನನ್ನು ಹೆತ್ತವರ ಬಳಿಗೆ ಕಳುಹಿಸಿ ನಮ್ಮೊಂದಿಗೆ ಮತ್ತೆ ಜೀವನ ನಡೆಸಲು ಅನುವು ಮಾಡಿಕೊಡಿ” ಎಂದು ಬಿಲಾಲ್‌ನ ತಂದೆ ಮನವಿ ಮಾಡಿಕೊಂಡಿದ್ದರು.

ಇದೀಗ ಹೆತ್ತವರ ಪ್ರಾರ್ಥನೆ ಫಲಿಸಿದೆ. ರವಿವಾರ ಮಧ್ಯಾಹ್ನ ಬಿಲಾಲ್ ಮನೆಗೆ ಮರಳಿದ್ದಾನೆ. ತಕ್ಷಣ ಆತನನ್ನು ಪೊಲೀಸರ ತಂಡ ವೈದ್ಯಕೀಯ ನೆರವು ಒದಗಿಸುವ ಉದ್ದೇಶದಿಂದ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದೆ ಎಂದು ಬಿಲಾಲ್‌ನ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಕುಟುಂಬದ ಹಾಗೂ ಪೊಲೀಸರ ಸಹಾಯದಿಂದ ಓರ್ವ ವ್ಯಕ್ತಿಯನ್ನು ಸಮಾಜದ ಮುಖ್ಯವಾಹಿನಿಗೆ ಮರಳಿ ಕರೆತರಲಾಗಿದೆ ಎಂದು ಜಮ್ಮು-ಕಾಶ್ಮೀರದ ಪೊಲೀಸರು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X