ಡಿ.3ರಂದು ಸಿದ್ದರಾಮಯ್ಯ ಮಂಗಳೂರಿಗೆ

ಮಂಗಳೂರು, ಡಿ.2: ಮಾಜಿ ಮುಖ್ಯಮಂತ್ರಿ, ರಾಜ್ಯ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಡಿ.3ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಸಂಜೆ 4 ಗಂಟೆಗೆ ಆಗಮಿಸುವ ಸಿದ್ದರಾಮಯ್ಯ ಅವರು ಕೆಸಿಎಫ್, ಎಸ್ಸೆಸ್ಸೆಫ್ ಹಾಗೂ ಎಸ್‌ವೈಎಸ್ ಸಂಯುಕ್ತ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ 'ಕನೆಕ್ಟ್- 2018' ಸಾಮುದಾಯಿಕ ಸಮ್ಮಿಲನ'ದಲ್ಲಿ ಭಾಗವಹಿಸುವರು. ಬಳಿಕ ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸುವ ಅವರು ರಾತ್ರಿ 9:30ಕ್ಕೆ ಬೆಂಗಳೂರಿಗೆ ಹಿಂದಿರುಗುವರು.
Next Story