ಶ್ರೀಕೃಷ್ಣ ಮಠದ ಮಧ್ವ ಸರೋವರಕ್ಕೆ ಬಿದ್ದು ಯಾತ್ರಾರ್ಥಿ ಮೃತ್ಯು
ಉಡುಪಿ, ಡಿ.3: ಉಡುಪಿ ಶ್ರೀಕೃಷ್ಣ ಮಠದ ಮದ್ವ ಸರೋವರದಲ್ಲಿ ಸ್ನಾನಕ್ಕೆ ಇಳಿದ ಯಾತ್ರಾರ್ಥಿಯೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಶಿವಮೊಗ್ಗ ವಿದ್ಯಾನಗರ 4ನೇ ಕ್ರಾಸ್ ನಿವಾಸಿ ಆದರ್ಶ(38) ಎಂದು ಗುರುತಿಸಲಾಗಿದೆ. ಉಡುಪಿ ಪೇಜಾವರ ಮಠದ ವಿಜಯದ್ವಜ ಛತ್ರದ ರೂಮ್ನಲ್ಲಿ ಉಳಿದುಕೊಂಡಿದ್ದ ಇವರು, ಮಠದ ಮಧ್ವ ಸೋವರದಲ್ಲಿ ಸ್ನಾನಕ್ಕೆ ಇಳಿದಿದ್ದರು.
ಫೀಡ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ಅಕಸ್ಮಿಕವಾಗಿ ಸರೋವರಕ್ಕೆ ಬಿದ್ದು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರೆನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹಕ್ಕಾಗಿ ಹುಡುಕಾಟ ನಡೆಸಿದರು. ಕೊನೆಗೆ ಮುಳುಗು ತಜ್ಞ ಅರುಣ ಕುಮಾರ್ ದೆಂದೂರುಕಟ್ಟೆ ಸರೋವರಕ್ಕೆ ಇಳಿದು ಮೃತದೇಹವನ್ನು ಮೇಲಕ್ಕೇತ್ತಿದರು.
ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಇಡಲಾಗಿದ್ದು, ಸಂಜೆ ವೇಳೆ ಆಗಮಿಸಿದ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





