ವೇಶ್ಯಾವಾಟಿಕೆ ಜಾಲ : ನಾಲ್ವರ ಬಂಧನ
ಉಳ್ಳಾಲ, ಡಿ. 3: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಬಳಿಯ ಮನೆಯೊಂದರಲ್ಲಿ ಇಬ್ಬರು ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಯುವಕರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುನ್ನೂರು ನಿವಾಸಿ ಆರೀಫ್ ಎಂಬಾತನ ಮನೆಯಲ್ಲಿ ರಮೀಝ್, ರಮಾಲ್, ಪರ್ವೇಝ್ ಎಂಬವರು ಸೇರಿಕೊಂಡು ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ದಂಧೆ ನಡೆಸುತ್ತಿದ್ದ ನಾಲ್ವರ ಪೈಕಿ ಸೈಯದ್ ಸಮೀರ್ ಮತ್ತು ರಮೀಝ್ ಎಂಬವರನ್ನು ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದಾರೆ. ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಬಂಧಿತರಿಂದ ಎರಡು ರಿಕ್ಷಾ ಮತ್ತು 24 ಸಾವಿರ ರೂ. ನಗದು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Next Story