ಮುಂದಿನ 48 ಗಂಟೆಗಳಲ್ಲಿ ತಮಿಳುನಾಡಿನ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ
ಚೆನ್ನೈ, ಡಿ.4: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಕಚೇರಿಯು ಮಂಗಳವಾರ ತಿಳಿಸಿದೆ.
ಮಂಗಳವಾರ ಬೆಳಿಗ್ಗೆ 8:30ಕ್ಕೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಕರಾವಳಿ ತಮಿಳುನಾಡು ಮತ್ತು ನೆರೆಯ ಪುದುಚೇರಿಯಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಇಲಾಖೆಯ ಉಪ ಮಹಾ ನಿರ್ದೇಶಕ ಎಸ್.ಬಾಲಚಂದ್ರನ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಮುಂದಿನ 48 ಗಂಟೆಗಳಲ್ಲಿ ತಮಿಳುನಾಡಿನ ಕರಾವಳಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯಾಗಲಿದೆ ಮತ್ತು ರಾಜ್ಯ ಹಾಗೂ ಪುದುಚೇರಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ.ಈ ಅವಧಿಯಲ್ಲಿ ಚೆನ್ನೈ ಮತ್ತು ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಬಿಟ್ಟುಬಿಟ್ಟು ಮಳೆ ಸುರಿಯಲಿದೆ ಎಂದರು.
Next Story