ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಟಿಆರ್‌ಎಸ್: ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ. 4: ತೆಲಂಗಾಣ ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಬಂಧಿಸುವ ಮೂಲಕ ಟಿಆರ್‌ಎಸ್‌ನ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಶೇಖರ್ ರಾವ್ ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ರೇವಂತ್ ರೆಡ್ಡಿ ಅವರ ಮನೆ ಬಾಗಿಲು ಒಡೆದು ಬಂಧಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಟಿಆರ್‌ಎಸ್ ಸರಕಾರದ ಕ್ರಮ ಸರಿಯಲ್ಲ ಎಂದು ಆಕ್ಷೇಪಿಸಿದರು.
ತೆಲಂಗಾಣದ ಕೊಡಂಗಲ್‌ನಲ್ಲಿ ಟಿಆರ್‌ಎಸ್ ಮುಖ್ಯಸ್ಥ ಕೆಸಿಆರ್ ಚುನಾವಣಾ ರ್ಯಾಲಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿಯವರನ್ನು ಚುನಾವಣಾ ಆಯೋಗದ ನಿರ್ದೇಶನದನ್ವಯ ಬಂಧಿಸಲಾಗಿದೆ ಎಂದು ಹೇಳಲಾಗಿದೆ.
Next Story





