ಉಡುಪಿ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಡಿ.4: ಜಿಲ್ಲೆಯ ಜಿಲ್ಲಾ ಸರಕಾರಿ ವಕೀಲರ ಹುದ್ದೆಯನ್ನು ತುಂಬಲು ಸರಕಾರ ಮಂಜೂರಾತಿ ನೀಡಿದ್ದು, ಜಿಲ್ಲಾ ಸರಕಾರಿ ವಕೀಲರಿಗಾಗಿ ಸೇವೆ ಸಲ್ಲಿಸಲು ಆಸಕ್ತಿ ಇರುವ, ಹತ್ತು ವರ್ಷಗಳ ಕಾಲ ವಕೀಲರ ವೃತ್ತಿ ಪೂರೈಸಿದ ಅರ್ಹ ವಕೀಲರಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಕೀಲ ವೃತ್ತಿಯಲ್ಲಿ ಕನಿಷ್ಟ 10 ವರ್ಷಗಳ ಅನುಭವವಿರಬೇಕು. ಅರ್ಜಿಗಳು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಂದ ಶಿಪಾರಸುಗೊಂಡ ನಂತರವೇ ಸರಕಾರಕ್ಕೆ ಸಲ್ಲಿಕೆಯಾಗಲಿವೆ. ಅರ್ಜಿುನ್ನು ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸಲು ಡಿ.12 ಕೊನೆಯ ದಿನ. ಅರ್ಜಿ ನಮೂನೆಗಳನ್ನು ಜಿಲ್ಲಾಧಿಕಾರಿ ಕಚೇರಿಯ ಆಡಳಿತ ಶಾಖೆಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story