Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರು ಹನಿ ನೀರಾವರಿ ಬಳಕೆಗೆ ಹೆಚ್ಚು...

ರೈತರು ಹನಿ ನೀರಾವರಿ ಬಳಕೆಗೆ ಹೆಚ್ಚು ಒತ್ತು ನೀಡಬೇಕು: ಸಂಸದೆ ಶೋಭಾ

ವಾರ್ತಾಭಾರತಿವಾರ್ತಾಭಾರತಿ4 Dec 2018 11:23 PM IST
share
ರೈತರು ಹನಿ ನೀರಾವರಿ ಬಳಕೆಗೆ ಹೆಚ್ಚು ಒತ್ತು ನೀಡಬೇಕು: ಸಂಸದೆ ಶೋಭಾ

ಚಿಕ್ಕಮಗಳೂರು, ಡಿ.4: ಹನಿ ನೀರಾವರಿ ಪದ್ದತಿ ಯೋಜನೆಯನ್ನು ಸ್ಥಳಿಯ ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕೆಂದು ರೈತರಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಕಿವಿಮಾತು ಹೇಳಿದರು.

ತರೀಕೆರೆ ತಾಲೂಕಿನ ನರಸೀಪುರದಲ್ಲಿ  ಜೈನ್ ಡ್ರಿಪ್ ಇರಿಗೇಷನ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿ ರೈತರ ಕೆರೆಗಳಿಗೆ ನೀರು ತುಂಬಿಸುವ ಹಾಗೂ ಹನಿ ನೀರಾವರಿ ಪದ್ದತಿ ಯೋಜನೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಜಲಸಂಪನ್ಮೂಲವನ್ನು ಉಳಿಸುವ ಉದ್ದೇಶ ಕಡಿಮೆ ನೀರನ್ನು ಬಳಸಿ ಹೆಚ್ಚು ಬೆಳೆಯನ್ನು ಬೆಳೆಯಲು ಅನುಕೂಲವಾಗುವ ಹನಿ ನೀರಾವರಿ ಪದ್ದತಿ ಯೋಜನೆಗೆ ಕೇಂದ್ರ ಸರ್ಕಾರ ಶೇ.90 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.10 ರಷ್ಟು ಅನುದಾನ ನೀಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಈ ಭಾಗದ ರೈತರಿಗೆ ಹನಿ ನೀರಾವರಿ ಪದ್ದತಿಯನ್ನು 287 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಿದೆ. ರೈತರು ಇದರ ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕೆಂದರು.

ಈ ಭಾಗದ ರೈತರು ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆಗಳಿಂದ ಅಂತರ್ಜಲ ಕುಸಿತ ಉಂಟಾಗಲಿದೆ ಎಂದು ಭದ್ರಾ ಮೇಲ್ದಂಡೆ ಯೋಜನೆಗೆ ವಿರೋಧಿಸಿದ್ದರು. ಅವರಿಗೆ ತೊಂದರೆ ಉಂಟಾಗಬಾರದೆಂಬ ಉದ್ದೇಶದಿಂದ ಸರ್ಕಾರವೇ 2009ರಲ್ಲಿ ಹನಿ ನೀರಾವರಿ ಯೋಜನೆ ಪದ್ದತಿಯನ್ನು ಜಾರಿಗೆ ತಂದಿದ್ದು, ಆದರೆ ಕಳೆದ ನಾಲ್ಕೂವರೆ ವರ್ಷಗಳಿಂದ ಈ ಯೋಜನೆ ಅಭಿವೃದ್ಧಿ ಕಾರ್ಯ ಕುಸಿತಗೊಂಡಿತ್ತು. ಸ್ಥಳಿಯ ಶಾಸಕ ಡಿ.ಎಸ್.ಸುರೇಶ್ ಈ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಿದ ಫಲವಾಗಿ ಇಂದು ಈ ಕಾಮಗಾರಿ ಚಾಲನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಒಟ್ಟು 16394 ಎಕರೆಗೆ ಹನಿ ನೀರಾವರಿ ಯೋಜನೆ ಪದ್ದತಿಯನ್ನು ಅಳವಡಿಸಲಾಗುತ್ತಿದ್ದು, 13883 ರೈತರಿಗೆ ಅನುಕೂಲವಾಗಲಿದೆ. ಮೊದಲನೆ ಹಂತದ ಹನಿ ನೀರಾವರಿ ಪದ್ದತಿಯನ್ನು ಅಳವಡಿಸಲು ಮತ್ತು ಪೂರ್ಣಗೊಳಿಸಲು ಎರಡು ವರ್ಷದ ಅವಧಿಯನ್ನು ನಿಗಧಿಗೊಳಿಸಲಾಗಿದ್ದು,  ಜೈನ್ ಡ್ರಿಪ್ ಇರಿಗೇಷನ್ ಕಂಪನಿಯು ಈ ಕಾರ್ಯವನ್ನು ಮಾಡುತ್ತಿದ್ದು, ನಂತರದ ಐದು ವರ್ಷಗಳ ಕಾಲ ನಿರ್ವಹಣೆ ಮಾಡಲಿದೆ. ಈ ಯೋಜನೆಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದ್ದು, ಪ್ರತಿ ತಿಂಗಳು ಕಂಪನಿಯು ಹಾಗೂ ಸಂಬಂಧಿಸಿದ ಅಭಿಯಂತರರು ಮಾಹಿತಿಯನ್ನು  ನೀಡಬೇಕೆಂದು ತಿಳಿಸಲಾಗಿದೆ ಎಂದರು.

ಜಿ.ಪಂ ಉಪಾಧ್ಯಕ್ಷ ಕೆ.ಆರ್.ಆನಂದಪ್ಪ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗಳ ಕಾಲುವೆಗಳಿಂದಾಗಿ ರೈತರು ತಮ್ಮ ಜಮೀನುಗಳಲ್ಲಿ ಅಂತರ್ಜಲ ಕುಸಿಯುತ್ತದೆ ಎಂಬ ಆತಂಕಕ್ಕೊಳಗಾಗಿದ್ದರು. ಇದನ್ನು ದೂರ ಮಾಡಲು ಅಂದಿನ ಮುಖ್ಯಮಂತ್ರಿಗಳು ಹನಿ ನೀರಾವರಿ ಪದ್ದತಿಯನ್ನು ಜಾರಿಗೆ ತರುವುದರ ಮೂಲಕ ರೈತರ ಆತಂಕವನ್ನು ದೂರ ಮಾಡಿದರು ಎಂದು ತಿಳಿಸಿದರು.

ಶಾಸಕ ಡಿ.ಎಸ್.ಸುರೇಶ್ ಮಾತನಾಡಿ, ರೈತರು ಈ ಯೋಜನೆಯನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳಬೇಕು. ಕಂಪನಿಯ ಐದು ವರ್ಷ ನಿರ್ವಹಣೆ ಮುಗಿದ ನಂತರ ಕೋ ಆಪರೇಟಿವ್ ಸೊಸೈಟಿಗಳನ್ನು ಮಾಡಿಕೊಂಡು ರೈತರೇ ಇದರ ನಿರ್ವಹಣೆಯನ್ನು ಮಾಡಬೇಕೆಂದರು.

ಇದರ ನಿರ್ವಾಹಣೆಗೆ ಸರ್ಕಾರ ಹಣ ನೀಡಲಿದೆ ಅದರ ಜೊತೆಗೆ ರೈತರು ಸಹ  ಹಣವನ್ನು ಕ್ರೋಢೀಕರಿಸಿಕೊಂಡು ಮಾಡುವುದರಿಂದ ಇದರ ನಿರ್ವಹಣೆ ಅತ್ಯಂತ ಸರಳವಾಗಿ ಮಾಡಲು ಸಾಧ್ಯವಾಗುತ್ತದೆ ಎಂದ ಅವರು ಹನಿ ನೀರಾವರಿ ಪದ್ದತಿ ಯೋಜನೆಯ ಅನುಷ್ಠಾನದ ಕಾಮಗಾರಿಗೆ ರೈತರು ಸಹಕರಿಸಿದಲ್ಲಿ ಶೀಘ್ರವಾಗಿ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ತರೀಕೆರೆ ತಾ.ಪಂ ಅಧ್ಯಕ್ಷೆ ಪದ್ಮಾವತಿ ಸಂಜೀವಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆ ವತಿಯಿಂದ ನೀಡುವ ಸಾಮಾಜಿಕ ಭದ್ರತೆಯ ಯೋಜನೆಗಳಾದ ಸಂಧ್ಯಾ ಸುರಕ್ಷಾ, ಪಿಂಚಣಿ ಸೌಲಭ್ಯ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ಚೆಕ್‍ಗಳನ್ನು ನೀಡಲಾಯಿತು. ಸಭೆಯಲ್ಲಿ ತಾ.ಪಂ ಉಪಾಧ್ಯಕ್ಷೆ ಮಂಜುಳ, ಸ್ಥಾಯಿ ಸಮಿತಿ ಸದಸ್ಯ ಸುರೇಶ್ ಕುಮಾರ್, ಸ್ಥಳಿಯ ಪ್ರತಿನಿಧಿಗಳಾದ ಹಾಲನಾಯಕ್, ಕಲ್ಪನ, ಸತೀಶ್, ಕುಮಾರ್, ವಸಂತಕುಮಾರ್, ಸ್ಥಳಿಯ ಮುಖಂಡ ಆನಂದಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X