3 ತಾಲೂಕುಗಳಲ್ಲಿ ಭತ್ತ ಖರೀದಿ ಕೇಂದ್ರ ಸ್ಥಾಪನೆ: ಚಿಕ್ಕಮಗಳೂರು ಡಿಸಿ ಶ್ರೀರಂಗಯ್ಯ

ಚಿಕ್ಕಮಗಳೂರು. ಡಿ.4: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಭತ್ತವನ್ನು ಖರೀದಿಸಲು ಚಿಕ್ಕಮಗಳೂರು, ತರೀಕೆರೆ ಮತ್ತು ಕೊಪ್ಪ ತಾಲೂಕುಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.
ಪ್ರತಿ ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ ರೂ.1750 ಗಳನ್ನು ಸರ್ಕಾರ ನಿಗದಿಪಡಿಸಿದ್ದು, ಸರ್ಕಾರದ ದರದಂತೆ ಭತ್ತ ಖರೀದಿಲಾಗುವುದು. ರೈತರು ಡಿ. 12 ರಿಂದ 15 ರವರೆಗೆ ಎನ್.ಐ.ಸಿಯು ಸಿದ್ದಪಡಿಸಿರುವ ತಂತ್ರಾಮಶದ ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಿರುವ ಅವರು ನೊಂದಾಣಿಗೆ ರೈತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಪಹಣಿ ಮತ್ತು ಮಾದರಿ ಪತ್ರವನ್ನು ನೀಡಿ ತಮ್ಮ ಹೆಸರನ್ನು ನೊಂದಯಿಸಿಕೊಳ್ಳಬಹುದಾಗಿದ್ದು, ರೈತರು ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಕೇಂದ್ರಗಳಿಗೆ ನೀಡುವ ಮೂಲಕ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.ಸಂ: 08262-235261 ಹಾಗೂ ಕೃಷಿ ಇಲಾಖೆಯ ದೂ.ಸಂ: 08262-220526 ಮತ್ತು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.





