ಎಕ್ಸಲೆಂಟ್ : ಎನ್‍ಡಿಎ ಲಿಖಿತ ಪರೀಕ್ಷೆಯಲ್ಲಿ ಮೂವರು ತೇರ್ಗಡೆ

ಮೂಡುಬಿದಿರೆ, ಡಿ. 5: ಇತ್ತೀಚೆಗೆ ನಡೆದ ದೇಶದ ಪ್ರತಿಷ್ಠಿತ ಎನ್‍ಡಿಎ (ನ್ಯಾಶನಲ್ ಡಿಫೆನ್ಸ್ ಅಕಾಡಮಿ) ಲಿಖಿತ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜು, ಕಲ್ಲಬೆಟ್ಟು, ಮೂಡಬಿದಿರೆಯ 3 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ.
ಅಂಕುಶ್ ಆಲಿ, ಕೀರ್ಥಿ ಬಿ.ಎನ್.ಸಿ ಹಾಗೂ ಸುಪ್ರೀತ್ ಎಸ್ ಬಿ. ತೇರ್ಗಡೆಯಾದ ವಿದ್ಯಾರ್ಥಿಗಳು.
ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತ ಜೈನ್, ಪ್ರಾಂಶುಪಾಲರಾದ ಪ್ರದೀಪ್ ಕುಮಾರ್ ಶೆಟ್ಟಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.
Next Story