ಡಿ. 6: ಬೈಂದೂರಿಗೆ ಸಂಸದ ರಾಘವೇಂದ್ರ
ಉಡುಪಿ, ಡಿ.5: ಶಿವಮೊಗ್ಗ ಲೋಕಸಬಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಇಂದು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇತ್ತೀಚಿನ ಉಪಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಅವರ ಮೊದಲ ಭೇಟಿ ಇದಾಗಿದೆ.
ಡಿ.6ರ ಬೆಳಗ್ಗೆ 9:30ಕ್ಕೆ ಬೈಂದೂರು ಪ್ರವಾಸಿ ಮಂದಿರದ ಆವರಣದಲ್ಲಿ ಸಂಸದರ ನೂತನ ಕಚೇರಿಯನ್ನು ಉದ್ಘಾಟಿಸುವ ರಾಘವೇಂದ್ರ, 10:30ಕ್ಕೆ ಸಾರ್ವಜನಿಕ ಕುಂದು ಕೊರತೆ ಹಾಗೂ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸುವರು. ಅಪರಾಹ್ನ 12:30ಕ್ಕೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ ಸಮಿತಿ) ಹಾಗೂ ಸಂಸತ್ ಸದಸ್ಯರ ಪ್ರದೇಶಾಭಿವೃದ್ದಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಂಜೆ 4:30ಕ್ಕೆ ಸಿದ್ದಾಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವರು.
Next Story





