ಸಕಲೇಶಪುರ: ಕಾಡಾನೆ ದಾಳಿ ಸಂತ್ರಸ್ತರ ಹೋರಾಟ ಅಂತ್ಯ

ಸಕಲೇಶಪುರ,ಡಿ.5: ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರಕ್ಕಾಗಿ ಕಳೆದ 6 ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದ ಸಕಲೇಶಪುರ-ಅಲೂರು ಭಾಗದ ರೈತರ ಪ್ರತಿಭಟನೆ ಬುಧವಾರ ಅಂತ್ಯಗೊಂಡಿದೆ.
ಬೆಳಗ್ಗೆ 10 ಗಂಟೆಗೆ ಆರಂಭವಾದ ಪ್ರತಿಭಟನೆಯಲ್ಲಿ, ನಿನ್ನೆ ಮುಖ್ಯಮಂತ್ರಿಗಳು ನಡೆಸಿದ ಸಭೆಯ ವಿಚಾರಗಳ ಬಗ್ಗೆ ಚರ್ಚೆಗಳನ್ನು ಮಾಡಿದ ರೈತರು ಮುಂದಿನ ಹಾಗುಹೋಗುಗಳ ಚಿಂತನೆ ನಡೆಸಿದರು. ಮಧ್ಯಾಹ್ನ 2 ಗಂಟೆಗೆ ಅಗಮಿಸಿದ ಅಧಿಕಾರಿಗಳು ಹಾಗೂ ಸಿಎಂ ಸಭೆಗೆ ತೆರೆಳಿದ್ದ ಬೆಳೆಗಾರರ ಸಂಘದ ಪದಾಧಿಕಾರಿಗಳ ತಂಡವು, 'ರೈತರ ಬೇಡಿಕೆಗಳನ್ನು ಪ್ರಾಮಾಣಿಕವಾಗಿ ಮಂಡಿಸಿದ್ದೇವೆ. ಮುಖ್ಯಮಂತ್ರಿಗಳು ಶಾಶ್ವತ ಪರಿಹಾರಕ್ಕೆ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ ಎಂದರು.
ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ತತಕ್ಷಣದಿಂದ ಜಾರಿಗೊಳಿಸಬಹುದಾದ ಭರವಸೆ ನೀಡಿದ ನಂತರ ರೈತರು ತಮ್ಮ ಮುಷ್ಕರವನ್ನು ಹಿಂಪಡೆದರು. ಬುಧವಾರದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಬಿ.ಅರ್.ಗುರುದೇವ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಯೋಗ ರಮೇಶ್, ಸಮಾಜ ಸೇವಕಾರದ ಬಿ.ಎಸ್ ಮಲ್ಲಿಕಾರ್ಜುನ್ ಇತರರು ಇದ್ದರು.





