ತಲೆಮರೆಸಿಕೊಂಡ ಆರೋಪಿ ವಿರುದ್ಧ ಪ್ರಕರಣ ದಾಖಲು
ಶಿರ್ವ, ಡಿ.5: ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಜಾಮೀನಿನಲ್ಲಿ ಬಿಡುಗಡೆ ಹೊಂದಿದ್ದ ಆರೋಪಿ ವಿರುದ್ಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಪು ನಿವಾಸಿ ಮೊಹಮ್ಮದ್ ಬಾಕರ್ ಎಂಬಾತನನ್ನು ಅಪರಾಧ ಪ್ರಕರಣಕ್ಕೆ ಸಂಬಂಧಿಸಿ 2011ರ ಮೇ 9ರಂದು ಬಂಧಿಸಿ, ಠಾಣೆಯಲ್ಲಿ ಷರತ್ತು ಬದ್ದ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿತ್ತು. ಬಳಿಕ ಆರೋಪಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರು ವುದು ಭಾರತೀಯ ದಂಡ ಸಂಹಿತೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು, ಆತನ ವಿರುದ್ದ ಶಿರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story