ಕಡ್ಡಾಯ ಮಣ್ಣು ಪರೀಕ್ಷೆಗೆ ಕೃಷಿ ವಿಜ್ಞಾನಿ ಡಾ.ಬಸವರಾಜ ಗಿರಿವರನ್ ಸಲಹೆ
ಬೆಂಗಳೂರು,ಡಿ.5: ರೈತರು ಉತ್ಕೃಷ್ಟವಾದ ವಿವಿಧ ಬೆಳೆಗಳನ್ನು ಬೆಳೆಯಲು ಮಣ್ಣಿನ ಪರೀಕ್ಷೆ ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬ ರೈತರೂ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೃಷಿ ವಿಜ್ಞಾನಿ ಡಾ.ಬಸವರಾಜ ಗಿರಿವರನ್ ಸಲಹೆ ನೀಡಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತಮ ಬೆಳೆ ಬೆಳೆಯಲು ಮಣ್ಣಿನ ಆರೋಗ್ಯ ಅತಿಮುಖ್ಯವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚು ಇಳುವರಿ ಪಡೆಯುವ ಉದ್ದೇಶದಿಂದ ಮಣ್ಣಿಗೆ ರಾಸಾಯನಿಕಗಳನ್ನು ಸಿಂಪಡಣೆ ಮಾಡುತ್ತಿದ್ದಾರೆ. ಇದರಿಂದಾಗಿ ಮನುಷ್ಯರು ಹಾಗೂ ಪ್ರಾಣಿ-ಪಕ್ಷಿಗಳೂ ಅಪಾಯ ಎದುರಿಸುವಂತಾಗಿದೆ ಎಂದರು.
ಕೀಟನಾಶಕ ಹಾಗೂ ರಾಸಾಯನಿಕಗಳ ಬಳಕೆಯಿಂದ ಆರೋಗ್ಯದ ಮೇಲೆ ಅಪಾರವಾದ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ, ರಾಸಾಯನಿಕಗಳನ್ನು ಹೊರತುಪಡಿಸಿ ಜೈವಿಕ ರಸಗೊಬ್ಬರಗಳನ್ನು ಬಳಕೆ ಮಾಡುವ ಮೂಲಕ ಕೃಷಿಯನ್ನು ಉಳಿಸಿಕೊಳ್ಳಬೇಕಿದೆ. ಅಲ್ಲದೆ, ಆರೋಗ್ಯಕರ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ ಎಂದು ತಿಳಿಸಿದರು.
Next Story





