ಬಾಬರಿ ಮಸೀದಿ ಪುನರ್ ನಿರ್ಮಾಣಕ್ಕೆ ಇಮಾಮ್ಸ್ ಕೌನ್ಸಿಲ್ ಮನವಿ

ಮಂಗಳೂರು, ಡಿ.5: ರಾಷ್ಟ್ರದ ಕಾನೂನನ್ನು ಕಡೆಗಣಿಸಿ ಕೆಡವಿ ಹಾಕಲಾದ ಬಾಬರಿ ಮಸೀದಿಯನ್ನು ಪುನಃ ನಿರ್ಮಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಇಮಾಮ್ಸ್ ಕೌನ್ಸಿಲ್ ದ.ಕ.ಜಿಲ್ಲಾಧಿಕಾರಿಗಳ ಮೂಲಕ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.
ಬಾಬರಿ ಮಸೀದಿಯನ್ನು ಅದೇ ಜಾಗದಲ್ಲಿ ನಿರ್ಮಿಸಬೇಕು, ಲಿಬರ್ಹಾನ್ ಆಯೋಗದ ವರದಿಯಲ್ಲಿ ತಿಳಿಸಿದ ಎಲ್ಲಾ ಅಪರಾಧಿಗಳಿಗೂ ಕಠಿಣ ಶಿಕ್ಷೆನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಿಯೋಗದಲ್ಲಿ ಇಮಾಮ್ಸ್ ಕೌನ್ಸಿಲ್ ಮುಖಂಡರಾದ ಜಾಫರ್ ಫೈಝಿ, ರಫೀಕ್ ದಾರಿಮಿ, ಉಸ್ಮಾನ್ ಸಅದಿ ಉಪಸ್ಥಿತರಿದ್ದರು.
Next Story