Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಿಗೆ...

ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಿಗೆ ಬಾಂಗ್ಲಾ ವಲಸಿಗರ ಪಟ್ಟ !

ಒಕ್ಕಲೆಬ್ಬಿಸಲು ಹುನ್ನಾರ: ಆರೋಪ

ವಾರ್ತಾಭಾರತಿವಾರ್ತಾಭಾರತಿ5 Dec 2018 11:05 PM IST
share
ಬೆಂಗಳೂರಿನಲ್ಲಿ ಕಟ್ಟಡ ಕಾರ್ಮಿಕರಿಗೆ ಬಾಂಗ್ಲಾ ವಲಸಿಗರ ಪಟ್ಟ !

#ಆಧಾರ್ ಕಾರ್ಡ್, ವೋಟರ್ ಐಡಿ ಹೊಂದಿರುವ ಕಾರ್ಮಿಕರು

ಬೆಂಗಳೂರು, ಡಿ.5: ಹತ್ತು-ಹದಿನೈದು ವರ್ಷಗಳಿಂದ ರಾಜಧಾನಿ ಬೆಂಗಳೂರಿನಲ್ಲಿಯೇ ನೆಲೆ ಕಂಡುಕೊಂಡಿರುವ ಬಡ ಕಟ್ಟಡ ಕಾರ್ಮಿಕರನ್ನು ಇದೀಗ ಬಾಂಗ್ಲಾ ದೇಶದ ನಿವಾಸಿಗಳೆಂದು ಬಿಂಬಿಸಿ, ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ನಗರದ ಮಹದೇವಪುರದ ತೂಬರಹಳ್ಳಿ ಹಾಗೂ ಕುಂದಲಹಳ್ಳಿ ವ್ಯಾಪ್ತಿಯಲ್ಲಿರುವ ನೂರಾರು ಕಟ್ಟಡ ಕಾರ್ಮಿಕರನ್ನು ಬಾಂಗ್ಲಾದೇಶದ ನಾಗರಿಕರು ಎಂದೆಲ್ಲಾ ಆರೋಪಿಸಿ ಒಕ್ಕಲೆಬ್ಬಿಸಿ ಅಲ್ಲಿನ ಭೂಮಿ ವಶಕ್ಕೆ ಪಡೆಯಲು ಕೆಲವರು ಹುನ್ನಾರ ನಡೆಸುತ್ತಿದ್ದಾರೆ. ಅದರ ಮೊದಲ ಹಂತವಾಗಿ, ಇಲ್ಲಿನ ಹತ್ತಾರು ಗುಡಿಸಲುಗಳಿಗೆ ಮೂರು ದಿನಗಳಿಂದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿ ತೊಂದರೆ ನೀಡಲಾಗುತ್ತಿದೆ ಎನ್ನುತ್ತಾರೆ ಸಂತ್ರಸ್ಥರು.

ಪ್ರತಿಭಟನೆ: ಬಡ ಕಟ್ಟಡ ಕಾರ್ಮಿಕರಿಗೆ ಮೂಲಸೌಕರ್ಯಗಳ ಜೊತೆಗೆ ಅವರ ಮಕ್ಕಳಿಗೆ ಶೈಕ್ಷಣಿಕ ಸವಲತ್ತುಗಳನ್ನು ಒದಗಿಸಬೇಕೆಂದು ಯುವ ಕರ್ನಾಟಕ ಸಂಘಟನೆ ಸದಸ್ಯರು, ನಟ, ಹೋರಾಟಗಾರ ಚೇತನ್ ಸೇರಿದಂತೆ ಪ್ರಮುಖರು ಪ್ರತಿಭಟನೆ ನಡೆಸಿ, ಇಲ್ಲಿನ ಗುಡಿಸಲು(ಶೆಡ್) ತೆರವುಗೊಳಿಸದಂತೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಎಲ್ಲವೂ ಇದೆ: ಇಲ್ಲಿ ನೆಲೆಸಿರುವ ಪ್ರತಿಯೊಬ್ಬರ ಬಳಿ ಮತದಾನ ಗುರುತಿನ ಚೀಟಿ ಮಾತ್ರವಲ್ಲದೆ, ಆಧಾರ್ ಕಾರ್ಡ್ ಇದೆ. ಹತ್ತಾರು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಕನ್ನಡ ಮಾತನಾಡುವ ಉತ್ತರ ಕರ್ನಾಟಕದ ಮಂದಿಯೂ ಇದ್ದಾರೆ. ಆದರೆ, ಕೆಲವರು ಉದ್ದೇಶಪೂರ್ವಕವಾಗಿ ಬಾಂಗ್ಲರು ಎಂದು ಬಿಂಬಿಸುತ್ತಿದ್ದಾರೆ ಎಂದು ಚೇತನ್ ಹೇಳಿದರು.

ಸೌಲಭ್ಯ ಬೇಕು: ತೂಬರಹಳ್ಳಿ ಹಾಗೂ ಕುಂದಲಹಳ್ಳಿ ಗುಡಿಸಲು ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು, ವಿದ್ಯುತ್, ರಸ್ತೆ ಬೇಕಾಗಿದೆ. ಆದರೆ, ಈ ಬೇಡಿಕೆಗಳನ್ನು ಈಡೇರಿಸುವ ಬದಲು, ಅಲ್ಲಿನ ನಿವಾಸಿಗಳನ್ನೇ ಒಕ್ಕಲೆಬ್ಬಿಸಿ ಕೈತೊಳೆದುಕೊಳ್ಳುವ ಹುನ್ನಾರವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಸ್ಥಳೀಯರ ಮುಖಂಡ ರಾಮು ರಾವ್ ಆರೋಪಿಸಿದರು.

ಸಾಬೀತುಪಡಿಸಲಿ

ತೂಬರಹಳ್ಳಿ-ಕುಂದಲಹಳ್ಳಿ ವ್ಯಾಪ್ತಿಯ ಶೆಡ್‌ಗಳಲ್ಲಿ ವಾಸುತ್ತಿರುವವರು ಭಾರತೀಯರೇ ಹೊರತು, ವಿದೇಶಿಗರಲ್ಲ. ಹತ್ತಾರು ವರ್ಷ ಇಲ್ಲಿಯೇ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇಂತಹ ವರ್ಗವನ್ನು ಬಾಂಗ್ಲರು ಎಂದು ಹೇಳುತ್ತಿರುವವರು ಮೊದಲು ದಾಖಲೆಗಳನ್ನು ಬಿಡುಗಡೆ ಮಾಡಿ ಸಾಬೀತುಪಡಿಸಲಿ.

-ಅನಂತ್‌ನಾಯ್ಕ, ವಕೀಲ

ಮಾನವೀಯ ಹೋರಾಟ

ಈ ಶೆಡ್‌ಗಳಲ್ಲಿ ಮಕ್ಕಳು, ಗರ್ಭಿಣಿ ಮಹಿಳೆಯರು ನೆಲೆಸಿದ್ದಾರೆ. ಇವರನ್ನು ಉದ್ದೇಶಪೂರ್ವಕವಾಗಿ ಒಕ್ಕಲೆಬ್ಬಿಸುವ ಶಕ್ತಿಗಳ ವಿರುದ್ಧ ಮಾನವೀಯತೆ ದೃಷ್ಟಿಯಿಂದ ಹೋರಾಟ ನಡೆಸಲಾಗುತ್ತಿದೆ. ಆದರೆ, ಬಾಂಗ್ಲಾ ವಲಸಿಗರಿಗೆ ಬೆಂಬಲ ಎಂದೆಲ್ಲಾ ಕೆಲವರು ಬಿಂಬಿಸುತ್ತಿದ್ದು, ಇವರ ವಿರುದ್ಧ ಕಾನೂನಿನ ಮೂಲಕ ಉತ್ತರ ನೀಡಲಾಗುವುದು ಎಂದು ನಟ ಚೇತನ್ ಎಚ್ಚರಿಕೆ ನೀಡಿದರು.

‘ಕೇಂದ್ರವೇ ತನಿಖೆ ನಡೆಸಲಿ’

ನಾವು ಭಾರತೀಯರು ಎನ್ನಲು ಎಲ್ಲ ಅಧಿಕೃತ ದಾಖಲೆಗಳಿವೆ. ವಿದೇಶಿಗರು ಎನ್ನುವವರು ಕೇಂದ್ರ ಸರಕಾರದ ತನಿಖಾ ಸಂಸ್ಥೆಗಳಿಂದಲೇ ತನಿಖೆ ನಡೆಸಿ ಸಾಬೀತು ಪಡಿಸಲಿ.

-ಸುದೇಶ್, ತೂಬರಹಳ್ಳಿ ನಿವಾಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X