ಭಟ್ಕಳ: ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ; ಶಿಕ್ಷಕ ಹೊಸಮನಿ ರಾಜ್ಯಮಟ್ಟಕ್ಕೆ

ಭಟ್ಕಳ, ಡಿ. 6: ಇಲ್ಲಿನ ಸರಕಾರಿ ಪ್ರೌಢಶಾಲೆ ಮುಂಡಳ್ಳಿಯ ಚಿತ್ರಕಲಾ ಶಿಕ್ಷಕರಾದ ಚೆನ್ನವೀರಪ್ಪ ರಾಯಪ್ಪ ಹೊಸಮನಿ ಇವರು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಗೆ ಸತತವಾಗಿ 2 ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉತ್ತರ ಕನ್ನಡ ಕಾರವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಜರುಗಿದ ಜಿಲ್ಲಾ ಮಟ್ಟದ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಥಳದಲ್ಲೆ ಚಿತ್ರ ಬಿಡಿಸುವ ಸ್ಫರ್ಧೆಯಲ್ಲಿ ಭಾಗವಹಿಸಿ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಹಾಗೂ ಇದೇ ಶೈಕ್ಷಣಿಕ ವರ್ಷದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಕರ ಸದನ ಬೆಂಗಳೂರಿನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿಯೂ ರಾಜ್ಯಮಟ್ಟವನ್ನು ಪ್ರತಿನಿಧಿಸಿರುತ್ತಾರೆ. ಇವರ ಈ ಸಾಧನೆಗೆ ಶಾಲಾ ಎಸ್.ಡಿ,ಎಂ, ಸಿ, ಮುಖ್ಯಾಧ್ಯಾಪಕರು ಶಿಕ್ಷಕ ವೃಂದ ಮತ್ತು ತಾಲೂಕಾ ಚಿತ್ರಕಲಾ ಶಿಕ್ಷಕರ ಸಂಘ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.