Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್ಥಿಕವಾಗಿ ಬಡತನದಲ್ಲಿರುವವರಿಗೆ 4 ಲಕ್ಷ...

ಆರ್ಥಿಕವಾಗಿ ಬಡತನದಲ್ಲಿರುವವರಿಗೆ 4 ಲಕ್ಷ ಮನೆ ನಿರ್ಮಾಣ: ಸಚಿವ ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ6 Dec 2018 9:25 PM IST
share
ಆರ್ಥಿಕವಾಗಿ ಬಡತನದಲ್ಲಿರುವವರಿಗೆ 4 ಲಕ್ಷ ಮನೆ ನಿರ್ಮಾಣ: ಸಚಿವ ಯು.ಟಿ.ಖಾದರ್

ಮೈಸೂರು,ಡಿ.6: ರಾಜ್ಯದಲ್ಲಿ ಆರ್ಥಿಕವಾಗಿ ಬಡತನದಲ್ಲಿರುವವರಿಗೆ ನಾಲ್ಕು ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಮುಂಬರುವ ಜ.26 ರ ಗಣರಾಜ್ಯೋತ್ಸವದಂದು ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಗುರುವಾರ ಭಾರತೀಯ ರಿಯಲ್ ಎಸ್ಟೇಟ್ ಉದ್ಯಮ ಸಂಸ್ಥೆ  ಕ್ರೆಡಾಯ್ ಇಂದಿನಿಂದ ಎರಡು ದಿನಗಳ ವರೆಗೆ ಆಯೋಜಿಸಿರುವ “ನ್ಯೂ ಇಂಡಿಯಾ ಸಮ್ಮಿಟ್” ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಆರ್ಥಿಕವಾಗಿ ಬಡತನದಲ್ಲಿರುವವರನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಸತಿ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ರಾಜ್ಯಾದ್ಯಂತ ಒಟ್ಟು ನಾಲ್ಕು ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ನಿರ್ಮಾಣ ಮಾಡಲು ಜ.26 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈಗಾಗಲೇ ಬೆಂಗಳೂರಿನಲ್ಲಿ ಒಂದು ಸಾವಿರ ಎಕರೆಯಷ್ಟು ಜಾಗ ಗುರುತಿಸಿದ್ದು, ಅಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಈ ಹಿಂದೆ ಮೂರು ಅಂತಸ್ಥಿನ ಮನೆಗಳನ್ನು ಮಾತ್ರ ನಿರ್ಮಾಣ ಮಾಡಲಾಗುತಿತ್ತು. ಈಗ ಹತ್ತು ಹಂತಸ್ಥಿನ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಇತರೆ ನಗರಗಳಲ್ಲಿ ಈಗಾಗಲೇ ಮನೆ ನಿರ್ಮಾಣ ಮಾಡಲು ಜಾಗಗಳನ್ನು ಗುರುತಿಸಲಾಗಿದ್ದು, ಕೈಗೆಟುಕುವ ದರದಲ್ಲಿ ಮನೆಗಳನ್ನು ನಿರ್ಮಾಣ ಮಾಡುವುದಾಗಿ ತಿಳಿಸಿದರು.

ಕ್ರೆಡಾಯ್ ಒಂದು ಉತ್ತಮ ರಿಯಲ್ ಎಸ್ಟೇಟ್ ಸಂಸ್ಥೆಯಾಗಿದ್ದು, ರಾಜ್ಯದಲ್ಲೂ ಹೆಚ್ಚು ಹೆಚ್ಚು ಬಂಡವಾಳ ಹೂಡಲು ಮುಂದಾದರೆ ತಮಗೆ ಬೇಕಿರುವ ಅನುಕೂಲಗಳನ್ನು ರಾಜ್ಯ ಸರ್ಕಾರ ಮಾಡಿಕೊಡಲಿದೆ. ಆರ್ಥಿಕ ಸಂಪನ್ಮೂಲ ಕ್ರೋಢೀಕರಣಗೊಂಡರೆ ನಗರಗಳನ್ನು ಅಭಿವೃದ್ದಿಪಡಿಸಬಹುದು. ಇದರಿಂದ ರಾಜ್ಯ ಮತ್ತು ದೇಶ ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದರು.

ರಿಯಲ್ ಎಸ್ಟೇಟ್ ಉದ್ಯಮ ಸೇರಿದಂತೆ ಯಾರೇ ಸ್ವಂತ ಮನೆಗಳನ್ನು ನಿರ್ಮಾಣ ಮಾಡಲು ಮುಂದಾದರೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ಏಕಗವಾಕ್ಷಿ ಯೋಜನೆಯನ್ನು ನಗರಾಭಿವೃದ್ದಿ ಇಲಾಖೆಯಲ್ಲಿ ತರಲಾಗಿದ್ದು, ಸೂಕ್ತ ದಾಖಲೆಗಳನ್ನು ಒದಗಿಸಿದರೆ ನಿವೇಶನ ಮತ್ತು ಕಟ್ಟಡಗಳ ಅನುಮತಿಯನ್ನು ನಿಗದಿತ ಸಮಯದಲ್ಲಿ ಒದಗಿಸುವುದಾಗಿ ಹೇಳಿದರು.

ಹಿಂದಿನ ಸರ್ಕಾರದಲ್ಲಿ ನಮ್ಮ ನಾಯಕರಾದ ಸಿದ್ದರಾಮಯ್ಯ ಅವರು ಪ್ರತಿಯೊಂದು ಕುಟುಂಬದವರಿಗೆ ಮನೆಗಳನ್ನು ನಿರ್ಮಾಣ ಮಾಡಬೇಕೆಂದು ಸಾಕಷ್ಟು ಯೋಜನೆಗಳನ್ನು ನೀಡಿದ್ದರು. ಅದನ್ನು ಮುಂದುವರೆಸಿಕೊಂಡು ಹೋಗುತ್ತಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಮನೆಗಳನ್ನು ನಿರ್ಮಾಣ ಮಾಡಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡುವುದಾಗಿ ಹೇಳಿದರು.

ಉನ್ನತ ಶಿಕ್ಷಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮಾತನಾಡಿ, ಕ್ರೆಡಾಯ್ ಸಂಸ್ಥೆ ದೇಶಾದ್ಯಂತ ಆವರಿಸಿದ್ದು, ಬಡವರಿಗೆ  ಸೂರು ನಿರ್ಮಿಸಿಕೊಡುವ ಪುಣ್ಯದ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಮೈಸೂರಿನ ಒಡೆಯರ ಕಾಲದಲ್ಲಿ ನಿರ್ಮಾಣಗೊಂಡ ಹಲವಾರು ಕಟ್ಟಡಗಳು ಇನ್ನೂ ಗಟ್ಟಿಯಾಗಿ, ಸುಂದರವಾಗಿವೆ. ಅದೇ ಮಾದರಿಯಲ್ಲಿ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲೀವಿಂಗ್ ನ ಸಂಸ್ಥಾಪಕ ಶ್ರೀರವಿಶಂಕರ್ ಗುರೂಜಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ತನ್ವೀರ್ ಸೇಠ್, ಮೇಯರ್ ಪುಷ್ಪಲತಾ ಜಗನ್ನಾಥ್, ಎನ್.ಐ.ಎಸ್ ಮುಖ್ಯಸ್ಥ ಬಾಲಕೃಷ್ಣ ಹೆಗ್ಡೆ, ಸಮ್ಮೇಳನದ ಅಧ್ಯಕ್ಷ ಜಕ್ಷಾಸ್, ಗೀತಾಂಬರನ್, ಕ್ರೆಡಾಯ್ ರಾಷ್ಟ್ರೀಯ ಕಾರ್ಯದರ್ಶಿ ಕೆ.ಶ್ರೀರಾಮ್, ಕರ್ನಾಟಕ ಮುಖ್ಯಸ್ಥ ಡಾ.ವಿ.ಕೆ.ಜಗದೀಶ್ ಬಾಬು, ಕ್ರೆಡಾಯ್ ಮೈಸೂರಿನ ಅಧ್ಯಕ್ಷ ಚಿನ್ನಸ್ವಾಮಿ, ಎನ್‍ಐಎನ್ ಸಂಘಟನಾ ಸಮಿತಿ ಮುಖ್ಯಸ್ಥ ಡಿ.ಶ್ರೀಹರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X