Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೀಮಾ-ಕೋರೆಗಾಂವ್ ಯುದ್ಧದ ವರ್ಷಾಚರಣೆ:...

ಭೀಮಾ-ಕೋರೆಗಾಂವ್ ಯುದ್ಧದ ವರ್ಷಾಚರಣೆ: ಪುಣೆ ಪೊಲೀಸರಿಂದ ಹೆಚ್ಚಿನ ಕಟ್ಟೆಚ್ಚರದ ಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ6 Dec 2018 9:38 PM IST
share
ಭೀಮಾ-ಕೋರೆಗಾಂವ್ ಯುದ್ಧದ ವರ್ಷಾಚರಣೆ: ಪುಣೆ ಪೊಲೀಸರಿಂದ ಹೆಚ್ಚಿನ ಕಟ್ಟೆಚ್ಚರದ ಕ್ರಮಗಳು

ಪುಣೆ,ಡಿ.6: ಮುಂದಿನ ವರ್ಷದ ಜ.1ರಂದು ಭೀಮಾ-ಕೋರೆಗಾಂವ್ ಯುದ್ಧದ 201ನೇ ವರ್ಷಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಯನ್ನು ತಡೆಯಲು ಪುಣೆ ಪೊಲೀಸರು ಎಲ್ಲ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

 ಈ ವರ್ಷದ ಜನವರಿಯಲ್ಲಿ ನಡೆದಿದ್ದ 200ನೇ ವರ್ಷಾಚರಣೆಯು ಹಿಂಸಾಚಾರಗಳಿಗೆ ಸಾಕ್ಷಿಯಾಗಿದ್ದು,ಓರ್ವ ವ್ಯಕ್ತಿಯು ಹತ್ಯೆಯಾಗಿದ್ದ.

ಈ ಬಾರಿ ಪರಿಸ್ಥಿತಿ ಕೈ ಮೀರಲು ಅವಕಾಶ ನೀಡದಿರಲು ನಿರ್ಧರಿಸಿರುವ ಪೊಲೀಸರು ‘ಜಯ ಸ್ತಂಭ’ವಿರುವ ಪ್ರದೇಶ ಮತ್ತು ಭೀಮಾ-ಕೋರೆಗಾಂವ ಹಾಗೂ ಸುತ್ತುಮುತ್ತಲಿನ ಗ್ರಾಮಗಳಲ್ಲಿ ಹೆಚ್ಚಿನ ಭದ್ರತೆಯನ್ನೇರ್ಪಡಿಸಲಿದ್ದಾರೆ ಎಂದು ಪುಣೆ ಗ್ರಾಮೀಣ ಎಸ್‌ಪಿ ಸಂದೀಪ ಪಾಟೀಲ್ ಅವರು ಸುದ್ದಿಗಾರರಿಗೆ ತಿಳಿಸಿದರು.

ವದಂತಿಗಳ ಹರಡುವಿಕೆಯನ್ನು ತಡೆಯಲು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲೆ ನಿಗಾಯಿರಿಸಲಾಗಿದೆ ಮತ್ತು ಸಮಾಜ ವಿರೋಧಿ ಶಕ್ತಿಗಳ ಮೇಲೂ ಕಣ್ಣಿರಿಸಲಾಗಿದೆ ಎಂದರು.

ಭೀಮಾ-ಕೋರೆಗಾಂವ್‌ನಲ್ಲಿ ಮತ್ತು ಸುತ್ತುಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುವುದು. ರಾಜ್ಯ ಮೀಸಲು ಪೊಲೀಸ್ ಪಡೆ,ಗೃಹರಕ್ಷಕರು ಮತ್ತ್ತು ಜಿಲ್ಲಾಡಳಿತದ ಅಧಿಕಾರಿಗಳನ್ನು ಅಲ್ಲಿ ನಿಯೋಜಿಸಲಾಗುವುದು. ಇದು ಪಂಢರಾಪುರದಲ್ಲಿ ಆಷಾಢ ಏಕಾದಶಿಯ ದಿನ ಅಥವಾ ಕುಂಭಮೇಳದಲ್ಲಿ ಏರ್ಪಡಡಿಸಲಾಗುವ ಬಂದೋಬಸ್ತ್‌ಗೆ ಸಮವಾಗಿರುತ್ತದೆ ಎಂದರು.

ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಧನಾತ್ಮಕ ವಾತಾವರಣವನ್ನು ಸೃಷ್ಟಿಸಲು ಜಿಲ್ಲಾಡಳಿತವು ಬಯಸಿದೆ ಎಂದ ಅವರು,ಈ ಬಾರಿ ಪೊಲೀಸರ ಅನುಮತಿಯಿಲ್ಲದೆ ಆಹಾರ ಮಳಿಗೆಗಳನ್ನು ಹಾಕುವಂತಿಲ್ಲ ಮತ್ತು ಜಯ ಸ್ತಂಭದ ಬಳಿ ರ್ಯಾಲಿಗಳನ್ನು ಸಂಘಟಿಸುವವರೂ ಅದಕ್ಕಾಗಿ ಅನುಮತಿಯನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದರು.

ಎಲ್ಲ ವಾಹನಗಳನ್ನು ಕಾರ್ಯಕ್ರಮ ಸ್ಥಳದಿಂದ ಎರಡು ಕಿ.ಮೀ.ದೂರವೇ ನಿಲ್ಲಿಸಲಾಗುತ್ತದೆ ಮತ್ತು ಸ್ಥಳಕ್ಕೆ ತೆರಳಲು ಬಸ್ ಸೌಲಭ್ಯವನ್ನು ಒದಗಿಸಲಾಗುತ್ತದೆ ಎಂದರು.

ಭೀಮಾ-ಕೋರೆಗಾಂವ್ ಯುದ್ಧದಲ್ಲಿ ಬ್ರಿಟಿಷರು ಮಹಾರಾಷ್ಟ್ರದ ಪೇಶ್ವೆಗಳನ್ನು ಸೋಲಿಸಿದ್ದರು. ಬ್ರಿಟಿಷರು ಯುದ್ಧದಲ್ಲಿ ಮೃತ ಸೈನಿಕರ ಸ್ಮರಣಾರ್ಥ ಪುಣೆ-ಅಹ್ಮದ್ ನಗರ ರಸ್ತೆಯ ಪೆರ್ನೆ ಗ್ರಾಮದಲ್ಲಿ ಸ್ಮಾರಕವನ್ನು ನಿರ್ಮಿಸಿದ್ದರು. ಮಹಾರ್ ಸಮುದಾಯಕ್ಕೆ ಸೇರಿದ್ದ ಸೈನಿಕರು ಬ್ರಿಟಿಷರ ಪರವಾಗಿ ಹೋರಾಡಿದ್ದ ಹಿನ್ನೆಲೆಯಲ್ಲಿ ದಲಿತ ನಾಯಕರು ಭೀಮಾ-ಕೋರೆಗಾಂವ ಯುದ್ಧ ದಿನವನ್ನು ಆಚರಿಸುತ್ತಿದ್ದಾರೆ.

ಪೇಶ್ವೆಗಳು ಬ್ರಾಹ್ಮಣರಾಗಿದ್ದು,ಯುದ್ಧದಲ್ಲಿಯ ವಿಜಯವನ್ನು ದಲಿತರ ದೃಢತೆಯ ಸಂಕೇತವನ್ನಾಗಿ ಪರಿಗಣಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X