ಬೆಂಗಳೂರು: ಬಸ್ ಹತ್ತುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಮೃತ್ಯು
ಬೆಂಗಳೂರು, ಡಿ.6: ಬಿಎಂಟಿಸಿ ಬಸ್ ಹತ್ತಲು ಮುಂದಾಗುತ್ತಿದ್ದಂತೆ ನಿಯಂತ್ರಣ ತಪ್ಪಿ ವ್ಯಕ್ತಿಯೊಬ್ಬರು ಕೆಳಗೆ ಬಿದ್ದ ಪರಿಣಾಮ ಮೃತಪಟ್ಟಿರುವ ಘಟನೆ ಇಲ್ಲಿನ ಉಪ್ಪಾರ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಬಸಪ್ಪ(35) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಬಸಪ್ಪ ಅವರು ಮನೆಗೆ ಹೋಗಲು ಬಿಎಂಟಿಸಿ ಬಸ್ ಹತ್ತುತ್ತಿದ್ದಂತೆ ಬಸ್ ಚಲಿಸಿದ್ದರಿಂದ ಆಯತಪ್ಪಿಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್ ಹಿಂಬದಿ ಚಕ್ರ ಇವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಉಪ್ಪಾರಪೇಟೆ ಠಾಣೆ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story