ಮಂಗಳೂರು ಪೌರ ಕಾರ್ಮಿಕ ಮಹಿಳೆಗೆ ಹಲ್ಲೆ: ಆಸ್ಪತ್ರೆಗೆ ದಾಖಲು

ಮಂಗಳೂರು, ಡಿ.7: ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದ ಪೌರ ಕಾರ್ಮಿಕ ಮಹಿಳೆಗೆ ದುಷ್ಕರ್ಮಿಗಳ ತಂಡವೊಂದು ಅವಾಚ್ಯವಾಗಿ ನಿಂದಿಸಿ, ಹಲ್ಲೆ ನಡೆಸಿದ ಘಟನೆ ನಗರದ ಮಾರ್ನಮಿಕಟ್ಟೆಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬಾಗಲಕೋಟೆ ನಿವಾಸಿ ಎಲ್ಲಮ್ಮ (36) ಹಲ್ಲೆಗೊಳಗಾದ ಮಹಿಳೆ.
ಹಲ್ಲೆಯಿಂದ ತೀವ್ರ ಗಾಯಗೊಂಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದ ನಗರ ದಕ್ಷಿಣ (ಪಾಂಡೇಶ್ವರ) ಪೊಲೀಸರು ಆಸ್ಪತ್ರೆಗೆ ಧಾವಿಸಿ ಗಾಯಾಳು ಮಹಿಳೆಯ ಹೇಳಿಕೆ ಪಡೆದಿದ್ದಾರೆ. ಹಲ್ಲೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.
Next Story