Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಖಾಸಗಿ ಆಸ್ಪತ್ರೆಯಲ್ಲಿ...

'ಖಾಸಗಿ ಆಸ್ಪತ್ರೆಯಲ್ಲಿ ಕಾನೂನುಬಾಹಿರವಾಗಿ ಅವಧಿಪೂರ್ವ ಪ್ರಸವ'

ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Dec 2018 8:49 PM IST
share
ಖಾಸಗಿ ಆಸ್ಪತ್ರೆಯಲ್ಲಿ ಕಾನೂನುಬಾಹಿರವಾಗಿ ಅವಧಿಪೂರ್ವ ಪ್ರಸವ

ಮಂಗಳೂರು, ಡಿ.7: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಾನೂನು ಬಾಹಿರವಾಗಿ ಅವಧಿಪೂರ್ವ ಪ್ರಸವ ಮಾಡಲಾಗಿದೆ. ಅಲ್ಲದೆ ಅಲ್ಲಿ ವೈದ್ಯಕೀಯ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ ಎಂದು ಶುಕ್ರವಾರ ನಡೆದ ಮಂಗಳೂರು ನಗರ ಪೊಲೀಸ್ ಆಯುಕ್ತರ ಫೋನ್-ಇನ್ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಖಾಸಗಿ ಆಸ್ಪತ್ರೆಯವರು ಮಗುವಿನ ದತ್ತು ಸ್ವೀಕಾರ ಪ್ರಕ್ರಿಯೆ ನಡೆಸುವಂತೆ ಜಿಲ್ಲಾ ಲೇಡಿಗೋಶನ್ ಆಸ್ಪತ್ರೆಗೆ ತಿಳಿಸಿದ್ದರು. ಆವಾಗ ಆಸ್ಪತ್ರೆಯವರು ಅವಧಿಪೂರ್ವ ಪ್ರಸವ ಮಾಡಿರುವುದು ಅಂದರೆ 7 ತಿಂಗಳಿಗೇ ಅಕ್ರಮವಾಗಿ ಹೆರಿಗೆ ಮಾಡಿಸುವುದು ಬೆಳಕಿಗೆ ಬಂದಿದೆ. ಗರ್ಭ ಧರಿಸಿದ 7 ತಿಂಗಳಲ್ಲಿ ಎಕ್ಸ್‌ರೇ ಪರೀಕ್ಷೆಯನ್ನೂ ಮಾಡಿಸಿದ್ದಾರೆ. ಇದು ಅಕ್ರಮವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತ ಟಿ.ಆರ್. ಸುರೇಶ್, ಈ ಕುರಿತು ಲಿಖಿತ ದೂರು ನೀಡಿದರೆ ಪರಿಶೀಲಿಸಿ ಸೂಕ್ತ ಕ್ರಮಕ್ಕೆ ಆರೋಗ್ಯ ಇಲಾಖೆಗೆ ಸೂಚಿಸಲಾಗುವುದು ಎಂದು ಹೇಳಿದರು.

ಅಪಾಯಕಾರಿ ರಸ್ತೆ ಅಂಚು: ವಾಮಂಜೂರಿನಲ್ಲಿ ರಸ್ತೆ ಅಂಚು ನೆಲದಿಂದ ಮುಕ್ಕಾಲು ಅಡಿ ಎತ್ತರವಾಗಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿದೆ. ಅಲ್ಲದೆ ಇಲ್ಲಿ ಬಸ್ಸುಗಳು ಸ್ಪರ್ಧೆಗೆ ಬಿದ್ದು ವೇಗವಾಗಿ ಸಂಚರಿಸುತ್ತದೆ. ಇತ್ತೀಚೆಗೆ ರಸ್ತೆಯ ಅಪಾಯಕಾರಿ ಅಂಚಿನಲ್ಲಿ ಸ್ಕೂಟರ್‌ನಿಂದ ಕುಸಿದು ಬಿದ್ದು ಗಾಯಗೊಂಡಿದ್ದಾಗಿ ಸ್ಥಳೀಯ ನಿವಾಸಿಯೊಬ್ಬರು ಹೇಳಿಕೊಂಡರು. ಈ ಬಗ್ಗೆ ದೂರು ನೀಡಿದರೆ ಸಂಬಂಧಿಸಿದ ಇಲಾಖೆಗೆ ಕ್ರಮಕ್ಕೆ ಸೂಚಿಸುವುದಾಗಿ ಆಯುಕ್ತರು ತಿಳಿಸಿದರು.

ಟಿಕೆಟ್ ನೀಡಲ್ಲ: ರೂಟ್ ನಂಬ್ರ 15ರಲ್ಲಿ ಹೋಗುವ ಬಸ್ಸುಗಳಲ್ಲಿ ಟಿಕೆಟ್ ನೀಡುತ್ತಿಲ್ಲ. ಲಾಲ್‌ಬಾಗ್‌ನಲ್ಲಿ ಪ್ರಯಾಣಿಕರನ್ನು ಇಳಿಸಿ ಬೇರೆ ಬಸ್ಸುಗಳಿಗೆ ಹತ್ತಿಸುತ್ತಾರೆ ಎಂದು ಮಹಿಳೆಯೊಬ್ಬರು ದೂರಿದರು. ಈ ರೂಟ್‌ನಲ್ಲಿ ಪ್ರತಿದಿನವೂ ವಿಶೇಷ ಕಾರ್ಯಾಚರಣೆ ನಡೆಸುವುದಾಗಿ ಟಿ.ಆರ್. ಸುರೇಶ್ ಭರವಸೆ ನೀಡಿದರು.

ಲಗ್ಸುರಿ ಕಾರುಗಳಿಗೆ ಟಿಂಟ್: ನಗರದಲ್ಲಿ ಸಾಮಾನ್ಯ ಕಾರುಗಳ ಗಾಜಿನ ಟಿಂಟ್ ತೆಗೆಯಲಾಗುತ್ತಿದೆ. ಆದರೆ ಐಷಾರಾಮಿ ಕಾರುಗಳ ಟಿಂಟ್ ತೆಗೆಯುತ್ತಿಲ್ಲ ಎಂದು ವ್ಯಕ್ತಿಯೊಬ್ಬರು ಆರೋಪಿಸಿದರು. ಟಿಂಟ್ ಹಾಕಿದ್ದರೆ ಅದನ್ನೂ ತೆಗೆಯಲಾಗುತ್ತದೆ. ಕೆಲವೊಂದು ಕಾರುಗಳ ಗಾಜಿನಲ್ಲೇ ಟಿಂಟ್ ಇರುತ್ತದೆ ಎಂದು ಆಯುಕ್ತರು ಸಮಜಾಯಿಶಿ ನೀಡಿದರು.

ತೊಕ್ಕೊಟ್ಟಿನಲ್ಲಿ ಬಸ್ ಸ್ಟಾಪ್ ಪ್ರದೇಶ ಬಿಟ್ಟು ರಸ್ತೆಯಲ್ಲೇ ಬಸ್ ನಿಲ್ಲಿಸುತ್ತಿದ್ದಾರೆ. ಇದರಿಂದ ವಾಹನ ದಟ್ಟಣೆ ಉಂಟಾಗುತ್ತಿದೆ ಎಂದು ದೇಳಕಟ್ಟೆ ನಿವಾಸಿ ರಫೀಕ್ ಹೇಳಿದರು. ಬಸ್‌ಬೇಯಲ್ಲೇ ಬಸ್ ನಿಲ್ಲಿಸಲು ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದರು.

ಡಿಸಿಪಿಗಳಾದ ಹನುಮಂತರಾಯ, ಉಮಾಪ್ರಶಾಂತ್, ಎಸಿಪಿ ಮಂಜುನಾಥ್ ಇದ್ದರು.

ಬೆಂಗ್ರೆಯಲ್ಲಿ ಗಾಂಜಾ ಹಾವಳಿ
ಇತ್ತೀಚೆಗೆ ತೋಟಬೆಂಗ್ರೆಯಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ ನಡೆದ ಬಳಿಕ ಅಲ್ಲಿ ಗಾಂಜಾ, ಡ್ರಗ್ಸ್ ಹಾವಳಿ ಮಟ್ಟ ಹಾಕಬೇಕೆಂಬ ಒತ್ತಾಯ ಕೇಳಿಬಂದಿತ್ತು. ಆದರೆ ಇನ್ನೂ ಮಾದಕ ವ್ಯಸನ ಜಾಲ ಅಲ್ಲಿ ಸಕ್ರಿಯವಾಗಿದೆ ಎಂದು ವ್ಯಕ್ತಿಯೊಬ್ಬರು ಆರೋಪಿಸಿದರು.

ಸಂಜೆಯಾದರೆ ಬೀಚ್ ಹತ್ತಿರ ಕಾಡು-ಪೊದೆಗಳಲ್ಲಿ ಗಾಂಜಾ ಸೇವನೆ ಮಾಡುತ್ತಾರೆ. ಶಾಲೆ, ಕಾಲೇಜು ಮಕ್ಕಳು ಕೂಡ ಇದರಲ್ಲಿ ಸೇರಿದ್ದಾರೆ. ಪಣಂಬೂರು ಠಾಣೆಗೆ ದೂರು ನೀಡಿದರೆ ಒಮ್ಮೆ ಬರ್ತಾರೆ, ಹೋಗ್ತಾರೆ ಎಂದು ಸ್ಥಳೀಯರೊಬ್ಬರು ದೂರಿದರು. ಈ ಪ್ರದೇಶದಲ್ಲಿ ಗಸ್ತು ಏರ್ಪಾಡು ಮಾಡುವುದಾಗಿ ಟಿ.ಆರ್. ಸುರೇಶ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X