ಮಂಗಳೂರು: 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು, ಡಿ. 7: ಕಳೆದ 10 ವರ್ಷಗಳಿಂದ ತಲೆ ಮರೆಸಿಕೊಂಡು ವಿದೇಶದಲ್ಲಿದ್ದ ಹಳೆ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ರೌಡಿ ನಿಗ್ರಹದಳ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಉಚ್ಚಿಲ ನಿವಾಸಿ ಮುಹಮ್ಮದ್ ರಫೀಕ್(38) ಬಂಧಿತ ಆರೋಪಿ. 2008ರಲ್ಲಿ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 10 ವರ್ಷಗಳಿಂದ ಈತ ತಲೆಮರೆಸಿಕೊಂಡಿದ್ದ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಎಸಿಪಿ ಮಂಜುನಾಥ ಶೆಟ್ಟಿ ನೇತೃತ್ವದಲ್ಲಿ ಉತ್ತರ ಉಪವಿಭಾಗದ ರೌಡಿ ನಿಗ್ರಹ ದಳದ ಪೊಲೀಸ್ ನಿರೀಕ್ಷಕ ರಫೀಕ್ ಮತ್ತು ತಂಡ, ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಉಮೇಶ್ ಕುಮಾರ್ ಮತ್ತು ಸಿಬ್ಬಂದಿ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
Next Story





