ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು
ಮಂಗಳೂರು, ಡಿ. 7: ನಗರದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಸಮೀಪ ಶುಕ್ರವಾರ ಅಪರಿಚಿತ ವ್ಯಕ್ತಿಯೊಬ್ಬರು ಮುಂಬೈಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮಂಗಳಾ ಎಕ್ಸ್‌ಪ್ರೆಸ್ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ.
ಮೃತ ವ್ಯಕ್ತಿ ಸುಮಾರು 35-40 ವರ್ಷ ವಯಸ್ಸಿನವರಾಗಿದ್ದು, ರೈಲು ಹಳಿ ದಾಟಲು ಯತ್ನಿಸುತ್ತಿದ್ದಾಗ ದಿಢೀರನೆ ರೈಲು ಬಂದು ಢಿಕ್ಕಿ ಹೊಡೆದಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಚಹರೆ: 5 ಅಡಿ ಎತ್ತರ, ದುಂಡು ಮುಖ, ಕಪ್ಪು ಪ್ಯಾಂಟ್ ಮತ್ತು ಬಿಳಿ ಶರ್ಟ್ ಹಾಗೂ ಅದರ ಮೇಲೆ ಕಪ್ಪು ಜರ್ಕಿನ್ ಧರಿಸಿದ್ದಾರೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಮೃತ ದೇಹವನ್ನು ವೆನ್‌ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.
Next Story