Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರ ಸಾಲಮನ್ನಾ ಯೋಜನೆಗೆ ಮುಖ್ಯಮಂತ್ರಿ...

ರೈತರ ಸಾಲಮನ್ನಾ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ

"ಅಪನಂಬಿಕೆ ಹುಟ್ಟಿಸಿದವರಿಗೆ ​ಮೈತ್ರಿ ಸರಕಾರ ದಿಟ್ಟ ಉತ್ತರ"

ವಾರ್ತಾಭಾರತಿವಾರ್ತಾಭಾರತಿ8 Dec 2018 7:52 PM IST
share
ರೈತರ ಸಾಲಮನ್ನಾ ಯೋಜನೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ

ಬೆಂಗಳೂರು, ಡಿ. 8: ರಾಜ್ಯಾದ್ಯಂತ ಸುಮಾರು 44 ಲಕ್ಷ ಮಂದಿ ರೈತರ, 40 ಸಾವಿರ ಕೋಟಿ ರೂ.ಬೆಳೆ ಸಾಲಮನ್ನಾ ಹಿನ್ನೆಲೆಯಲ್ಲಿ ಋಣಮುಕ್ತ ಪತ್ರ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಅಧಿಕೃತ ಚಾಲನೆ ನೀಡಿದರು.

ಶನಿವಾರ ದೊಡ್ಡಬಳ್ಳಾಪುರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಸರಕಾರವು ಆಯವ್ಯಯದಲ್ಲಿ ಘೋಷಿಸಿದಂತೆ ರೈತರ ಸಾಲಮನ್ನಾ ಪ್ರಕ್ರಿಯೆಗೆ ಚಾಲನೆ ನೀಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದರೆ, ಅಲ್ಲಿ ನೆರೆದಿದ್ದ ಸಾವಿರಾರು ರೈತರು ಹರ್ಷೋದ್ಘಾರದಿಂದ ಸ್ವಾಗತಿಸಿದರು.

‘ಮೂರ್ನಾಲ್ಕು ವರ್ಷಗಳಿಂದ ಬರದ ದವಡೆಗೆ ಸಿಲುಕಿದ್ದ ರೈತರ ಸಾಲಮನ್ನಾ ಮಾಡಲು ಒತ್ತಾಯ ಬಂದ ಹಿನ್ನೆಲೆಯಲ್ಲಿ ಹಾಗೂ ರೈತರ ಸಂಕಷ್ಟಗಳನ್ನು ಅರಿತ ಮೈತ್ರಿ ಸರಕಾರ ಸಾಲಮನ್ನಾದಂಥ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಅಪನಂಬಿಕೆ ಹುಟ್ಟಿಸಿದವರಿಗೆ ದಿಟ್ಟ ಉತ್ತರ ನೀಡಿದೆ’ ಎಂದು ಕುಮಾರಸ್ವಾಮಿ ತಿಳಿಸಿದರು. 

ರೈತರು ಸಾಲಮನ್ನಾ ಬಗ್ಗೆ ಯಾವ ಸಂಶಯಗಳಿಗೂ ಕಿವಿಗೊಡಬಾರದು. ರಾಜ್ಯ ಸರಕಾರ ಸಾಲಮನ್ನಾ ಪ್ರಕ್ರಿಯೆಯನ್ನು ನೋಡಿಕೊಳ್ಳಲೆಂದೇ ಪ್ರತ್ಯೇಕ ಸೆಲ್ ಸ್ಥಾಪಿಸಿ, ಒಬ್ಬ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳ ಜೊತೆ 10 ಸಭೆಗಳನ್ನು ನಡೆಸಿದ್ದರೂ, ಅವರ ಕಡೆಯಿಂದ ಸಹಕಾರ ದೊರೆತಿಲ್ಲ. ಕೇಂದ್ರ ಸರಕಾರಕ್ಕೆ ಈ ಕುರಿತು ಮಾಡಿರುವ ಮನವಿಯನ್ನು ಪರಿಗಣಿಸಲಾಗಿಲ್ಲ ಎಂದರು. ರೈತರಿಗೆ ಉತ್ತಮ ಮತ್ತು ನೆಮ್ಮದಿಯ ಬದುಕು ನಡೆಸಲು ರಾಜ್ಯ ಸರಕಾರ ಎಲ್ಲ ಸಹಕಾರ ನೀಡಲಿದೆ. ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕುಗಳ ರೈತರ ಸಾಲಮನ್ನಾ ಮಾಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರೆ, ರಾಷ್ಟ್ರದಲ್ಲಿಯೇ ಇದೊಂದು ಐತಿಹಾಸಿಕ ನಿರ್ಧಾರ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಇದೊಂದು ಐತಿಹಾಸಿಕ ಕಾರ್ಯಕ್ರಮ. ಮೈತ್ರಿ ಸರಕಾರ ರೈತಪರ ಸರಕಾರ ಎನ್ನುವುದಕ್ಕೆ ಸಾಲಮನ್ನಾ ಯೋಜನೆಯೆ ಉತ್ತಮ ಉದಾಹರಣೆ. ಇನ್ನಾದರೂ ವಿರೋಧ ಪಕ್ಷದವರು ಕುಹಕವಾಡುವುದನ್ನು ನಿಲ್ಲಿಸಲಿ ಎಂದು ಹೇಳಿದರು.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಆಯವ್ಯಯದಲ್ಲಿ ಘೋಷಿಸಿದಂತೆ ಸಾಲಮನ್ನಾ ಯೋಜನೆಗೆ ಚಾಲನೆ ನೀಡುವ ಮೂಲಕ ಸರಕಾರ ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ. ಇದನ್ನು ಅರಿತು ರೈತರು ತಾಳ್ಮೆಯಿಂದ ಸಹಕರಿಸಬೇಕು ಎಂದು ತಿಳಿಸಿದರು.

ಸಂಸದ ವೀರಪ್ಪ ಮೊಯ್ಲಿ ಮಾತನಾಡಿ, ಸಾಲಮನ್ನಾ ಇಡೀ ದೇಶದಲ್ಲಿಯೇ ಒಂದು ಮಾದರಿ ಕಾರ್ಯಕ್ರಮವಾಗಿದೆ. ಸರಕಾರ ತನ್ನ ಭರವಸೆಯನ್ನು ಈಡೇರಿಸಿ ರೈತರನ್ನು ಋಣಮುಕ್ತಗೊಳಿಸಿ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ರೈತರ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುವುದು ಸಲ್ಲದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿ ಸಚಿವ ಶಿವಶಂಕರರೆಡ್ಡಿ ಮಾತನಾಡಿ, ಸರಕಾರ ರೈತರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿರುವುದಲ್ಲದೆ, ಹಲವು ಸಕಾರಾತ್ಮಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಮೊದಲ ಬಾರಿಗೆ ರೈತಪರ ಕಾರ್ಯಕ್ರಮ ರೂಪಿಸಲು ರೈತರ ಸಲಹೆಗಳನ್ನು ಪಡೆಯಲು ರೈತ ಸಲಹಾ ಸಮಿತಿ ರಚಿಸಲಾಗಿದೆ. ಅದರಂತೆಯೇ ರೈತರಿಗೆ ಪೂರಕವಾದ ಕಾರ್ಯಕ್ರಮ ರೂಪಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X