ಬೆಂಗಳೂರು: ಮಾಂಗಲ್ಯ ಸರ ದೋಚಿದ್ದ ಇಬ್ಬರ ಸೆರೆ

ಬೆಂಗಳೂರು, ಡಿ.8: ಸಂಬಂಧಿಕರ ಮದುವೆಗೆ ಬಂದಿದ್ದ ಮಹಿಳೆಯೊಬ್ಬರ 123 ಗ್ರಾಂ ಮಾಂಗಲ್ಯಸರ ದೋಚಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಇಲ್ಲಿನ ಮಲ್ಲೇಶ್ವರಂ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮುಹಮ್ಮದ್ ರಫೀಕ್(29) ಹಾಗೂ ತೌಸಿಫ್ ಸಾದಿಕ್(27) ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 11ರಂದು ನಿರ್ಮಲಾ ಎಂಬುವರು ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕಾಗಿ ಮಲ್ಲೇಶ್ವರಂನಲ್ಲಿರುವ ಖಾಸಗಿ ಹೊಟೇಲ್‌ನಲ್ಲಿ ಲಿಫ್ಟ್‌ಗಾಗಿ ಕಾಯುತ್ತಿದ್ದಾಗ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು. ಬಂಧಿತರಿಂದ ಸುಮಾರು 3.4 ಲಕ್ಷ ರೂ. ಬೆಲೆಬಾಳುವ 123 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ಬೈಕ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





