Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಲ್ತ್‌ಕೇರ್ ಪ್ರೊಫೆಷನಲ್ ಮಸೂದೆ...

ಹೆಲ್ತ್‌ಕೇರ್ ಪ್ರೊಫೆಷನಲ್ ಮಸೂದೆ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ: ಕೇಂದ್ರ ಸಚಿವ ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ8 Dec 2018 9:56 PM IST
share
ಹೆಲ್ತ್‌ಕೇರ್ ಪ್ರೊಫೆಷನಲ್ ಮಸೂದೆ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರ: ಕೇಂದ್ರ ಸಚಿವ ಸದಾನಂದಗೌಡ

ಬೆಂಗಳೂರು, ಡಿ.8: ‘ಹೆಲ್ತ್‌ಕೇರ್ ಪ್ರೊಪೆಷನಲ್ ಮಸೂದೆ-2018’ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಅಂಗೀಕಾರವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಭರವಸೆ ನೀಡಿದ್ದಾರೆ.

ನಗರದ ನಿಮ್ಹಾನ್ಸ್ ಕನ್ವೆನ್ಷನ್ ಸಭಾಂಗಣದಲ್ಲಿ ಸೊಸೈಟಿ ಆಫ್ ಇಂಡಿಯನ್ ರೇಡಿಯೋಗ್ರಾರ್ಸ್‌, ರಾಜ್ಯ ಮೆಡಿಕಲ್ ರೇಡಿಯಾಲಜಿಕಲ್ ಟೆಕ್ನಾಲಜಿಸ್ಟ್ ಮತ್ತು ರಾಜ್ಯ ಖಾಸಗಿ ರೇಡಿಯಾಲಜಿಕಲ್ ಟೆಕ್ನಾಲಜಿಸ್ಟ್’ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರೇಡಿಯಾಲಜಿ ಸಂಬಂಧ 20ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರೇಡಿಯಾಲಜಿಸ್ಟ್‌ಗಳು ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಂತ್ರಜ್ಞರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೆಲ್ತ್‌ಕೇರ್ ಪ್ರೊೆಷನಲ್ ಮಸೂದೆಯ ಜಾರಿಗೆ ಕೇಂದ್ರ ಸರಕಾರ ಬದ್ಧವಿದೆ. ಈ ನಿಟ್ಟಿನಲ್ಲಿ ಈ ವರದಿ ಸಂಬಂಧ ಲೋಕಸಭೆಯಲ್ಲಿ ಸುದೀರ್ಘವಾದ ಚರ್ಚೆ ನಡೆದು ಅಂಗೀಕಾರವಾಗಿದೆ. ಅದನ್ನು ರಾಜ್ಯಸಭೆಗೆ ಕಳುಹಿಸಿದ್ದು, ಅದು ಈ ಅಧಿವೇಶನದಲ್ಲಿ ಅಂಗೀಕಾರವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

ದೇಶದಲ್ಲಿ ಕಳೆದ ಮೂರು ದಶಕಗಳಿಂದ ರೇಡಿಯಾಲಜಿ ತಂತ್ರಜ್ಞಾನದಲ್ಲಿ ವಿಭಿನ್ನವಾದ ಆವಿಷ್ಕಾರಗಳು ನಡೆಯುತ್ತಿವೆ. ಎಕ್ಸ್-ರೇನಿಂದ ಪ್ರಾರಂಭವಾಗಿ ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್, ಪೆಟ್ ಸ್ಕ್ಯಾನ್ ಸೇರಿದಂತೆ ಹಲವು ತಂತ್ರಜ್ಞಾನಗಳಿಂದ ವ್ಯಕ್ತಿಯ ದೇಹದಲ್ಲಿರುವ ಕಾಯಿಲೆಯನ್ನು ನಿಖರವಾಗಿ ಗುರುತಿಸುವ ತಂತ್ರಜ್ಞಾನಗಳು ಆವಿಷ್ಕಾರಗೊಂಡಿವೆ. ಹೀಗಾಗಿ, ಮುಂಬರುವ ದಿನಗಳಲ್ಲಿ ರೇಡಿಯೋಗ್ರಾರ್‌ಗಳ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಣಿಪಾಲ್ ಆಸ್ಪತ್ರೆಯ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್ ಮಾತನಾಡಿ, ನನಗೆ ಆರಂಭದ ದಿನಗಳಲ್ಲಿ ರೇಡಿಯೋಗ್ರಫಿ ಎಂದರೆ ಭಯ ಪಡುತ್ತಿದೆ. ರೇಡಿಯೋಗ್ರಫಿ ಮಾಡುವಾಗ ಬೆಳಕಿನ ಕಿರಣಗಳು ಸುಡಬಹುದು ಎಂಬ ಭಾವನೆ ಇತ್ತು. ಪ್ರಸ್ತುತ ಸಂದರ್ಭದಲ್ಲಿ ರೇಡಿಯಾಲಜಿ ಇಲ್ಲದೆ ಯಾವುದೇ ಕಾಯಿಲೆಗಳಿಗೂ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂಬಂತಹ ಪರಿಸ್ಥಿತಿಯಿದೆ. ಭಾರತದಲ್ಲಿ ರೇಡಿಯಾಲಜಿಯ ಯಾವುದೇ ಉಪಕರಣಗಳನ್ನು ದೇಶೀಯವಾಗಿ ತಯಾರಿಸಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಿಮ್ಹಾನ್ಸ್‌ನ ನಿರ್ದೇಶಕ ಡಾ.ಗಂಗಾಧರ್ ಮಾತನಾಡಿ, ದೇಶದಲ್ಲಿ ರೇಡಿಯಾಲಜಿ ವ್ಯವಹಾರ ವಿಸ್ತಾರಗೊಂಡಿದೆ. ರೇಡಿಯಾಲಜಿ ಯಂತ್ರಗಳು ತುಂಬಾ ಸಂಕೀರ್ಣವಾಗಿದ್ದು, ರೋಗಿಗಳಿಗೆ ಯಾವುದೇ ಅಡ್ಡಪರಿಣಾಮಗಳಾಗದಂತೆ ಚಿಕಿತ್ಸೆ ನೀಡುವುದು ಸವಾಲಿನ ಕೆಲಸವಾಗಿದೆ. ಕಳೆದ ಐದು ವರ್ಷಗಳಿಂದ ನಮ್ಮ ಸಂಸ್ಥೆಯಲ್ಲಿ ಖರೀದಿಸಿರುವ ಉಪಕರಣಗಳಲ್ಲಿ ಶೇ.20ರಷ್ಟು ರೇಡಿಯಾಲಜಿಗೆ ಸಂಬಂಧಪಟ್ಟವುಗಳಾಗಿವೆ ಎಂದು ವಿವರಿಸಿದರು.

ಸಮಾರಂಭದಲ್ಲಿ ಶಾಸಕ ರಾಮಲಿಂಗಾರೆಡ್ಡಿ, ಸೊಸೈಟಿ ಆಫ್ ಇಂಡಿಯನ್ ರೇಡಿಯೋಗ್ರಾರ್ಸ್‌ ಅಧ್ಯಕ್ಷ ತ್ರಿಲೋಕಿನಾಥ್ ಮಿಶ್ರ, ತಜ್ಞ ವೈದ್ಯರಾದ ಪ್ರೊ.ಬಿ.ವೈ.ಕೆ.ಆರ್ಯ, ಡಾ.ಅರುಣ್‌ಕುಮಾರ್ ಗುಪ್ತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X