ಮುಂದಿನ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಆಯೋಜಿಸಲಾಗುವುದು: ಸಚಿವ ಯು.ಟಿ. ಖಾದರ್
ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ಬಂಟ್ವಾಳ, ಡಿ. 8: ಮುಂದಿನ ರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಸಹಕಾರದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಎರಡು ದಿನಗಳ ಕಾಲ ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ನಡೆದ 19ನೆ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ.ತುಕರಾಮ್ ಪೂಜಾರಿ ದಂಪತಿ ಹಾಗೂ ಪ್ರಸ್ತುತ ಸಾಲಿನ ರಾಜ್ಯೋತ್ಸವ ಪುರಸ್ಕೃತರಾದ ಕೃಷ್ಣ ಕುಮಾರ ಪೂಂಜರನ್ನು ಸನ್ಮಾನಿಸಿ ಅವರು ಮಾತನಾಡುತ್ತಿದ್ದರು.
ಸಾಹಿತ್ಯವು ಸಮಾಜದ ಆಗು, ಹೋಗುಗಳ ಕಿಟಕಿಯಾಗಿದೆ. ಸಾಹಿತ್ಯಕ್ಕೆ ವಿಶೇಷವಾದ ಶಕ್ತಿಯಿದ್ದು, ಸಾಹಿತ್ಯವು ಸಮಾಜದ ಒಳಿತಿಗಾಗಿ ಕೆಲಸ ಮಾಡಬೇಕಾಗಿದೆ ಎಂದ ಅವರು, ಪೋಷಕರು ತಮ್ಮ ಮಕ್ಕಳನ್ನು ಸಾಹಿತ್ಯ ಸಮ್ಮೇಳನ, ಪುಸ್ತಕ ಮೇಳದಂತ ಕಾರ್ಯಕ್ರಮಗಳಿಗೆ ಕರೆ ತಂದು ಸಾಹಿತ್ಯದ ಅಭಿರುಚಿ ಮೂಡಿಸಬೇಕು ಎಂದು ಹೇಳಿದರು.
20ನೆ ಸಮ್ಮೇಳನ ಮಾಣಿಯಲ್ಲಿ
ಇದೇ ವೇಳೆ ಸಚಿವ ಯು.ಟಿ.ಖಾದರ್ ಮುಂದಿನ 20ನೇ ಬಂಟ್ವಾಳ ತಾಲೂಕು ಸಾಹಿತ್ಯ ಸಮ್ಮೇಳನ ಆಚರಿಸಲು ಮಾಣಿಯ ಸಾಹಿತ್ಯಾಭಿಮಾನಿಗಳಿಗೆ ವೀಳ್ಯ ಪ್ರದಾನ ಮಾಡಿದರು.
ಕನ್ನಡದ ಅಪಭ್ರಂಶ ಸಲ್ಲದು
ಕುಂದಾಪುರದ ನ್ಯಾಯವಾದಿ ಎ.ಎಸ್.ಎನ್.ಹೆಬ್ಬಾರ್ ಸಮಾರೋಪ ಭಾಷಣ ಮಾಡಿ, ಸರಕಾರವು ತನ್ನ ಆಡಳಿತ ಯಂತ್ರವಾಗಿ ಕನ್ನಡಕ್ಕೆ ಸಂಸ್ಕೃತವನ್ನು ತುರುಕಿಸುವ ಮೂಲಕ ಕನ್ನಡವನ್ನು ಅಪಭ್ರಂಶ ಮಾಡುತ್ತಿದೆ ಎಂದು ವಿಷಾಧಿಸಿದರು.
ಕನ್ನಡ ಪ್ರಾಚೀನ ಭಾಷೆಯಾಗಿದ್ದು, ಇಂಗ್ಲಿಷ್ ಹಾಗೂ ಹಿಂದಿ ಭಾಷೆಗಿಂತ ಮೊದಲೇ ಹುಟ್ಟಿಕೊಂಡಿದೆ. ಕನ್ನಡದಲ್ಲಿ ವಿಪುಲವಾದ ಪದಪುಂಜಗಳಿದ್ದು, ಇದರ ಕ್ಷೇತ್ರ ಕಾರ್ಯ ಮಾಡುವುದರೊಂದಿಗೆ ಕನ್ನಡದ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು. ಕನ್ನಡ ಧ್ವನಿಪೂರ್ಣವಾದ ಭಾಷೆಯಾಗಿದ್ದು, ಬದುಕಿನ ಅಂಗವಾಗಿದೆ. ಕನ್ನಡವು ಕೇವಲ ಕಪ್ಪು, ಬಿಳುಪು ಅಕ್ಷರದ ಬರವಣಿಗೆಯಾಗದೆ, ನಿರಂತರ ಸಾಹಿತ್ಯವಾಗಲಿ ಎಂದು ಹೇಳಿದರು.
ಸಮ್ಮೇಳನಾಧ್ಯಕ್ಷ ಪ್ರೊ.ತುಕರಾಮ್ ಪೂಜಾರಿಯವರು ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಗೊಳಿಸಿದ ಕಸಾಪ, ಸಮ್ಮೇಳನ ಸಂಘಟಕರು ಹಾಗೂ ಸಮ್ಮೇಳನಾಧ್ಯಕ್ಷರು, ಸಾಹಿತ್ಯಾಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಬಂಟ್ವಾಳ ಭೂ ಬ್ಯಾಂಕ್ ಅಧ್ಯಕ್ಷ ಸುದರ್ಶನ್ ಜೈನ್, ತಾಪಂ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಆಚಾರ್ಯ, ಜೋರ್ಡುಮಾರ್ಗ ನೇತ್ರಾವತಿ ಜೇಸಿ ಅಧ್ಯಕ್ಷ ಸವಿತಾ ನಿರ್ಮಲ್ ಕತ್ತಾರ್ ಕರ್ನಾಟಕ ಸಂಘದ ಉಪಾಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು, ಸದಾಶಿವ ಡಿ.ತುಂಬೆ, ರೋ.ಪ್ರಕಾಶ ಕಾರಂತ, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣಕುಮಾರ್ ಪೂಂಜ, ಬಂಟ್ವಾಳ ತಾ.ಕಸಾಪ ಅಧ್ಯಕ್ಷ ಮೋಹನ್ ರಾವ್ ಮೊದಲಾದವರು ವೇದಿಕೆಯಲ್ಲಿದ್ದರು.
ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎನ್ ಗಂಗಾಧರ ಆಳ್ವ ಸ್ವಾಗತಿಸಿದರು. ಸದಾನಂದ ಆಳ್ವ ಕಂಪ ವಂದಿಸಿದರು. ಕೆ.ಸುಜಾತ, ಶ್ರಿನಿವಾಸ ಕೆದಿಲ ನಿರೂಪಿಸಿದರು. ಟಿ.ಸುಖೇಶ್ ಶೆಟ್ಟಿ ಫರಂಗೀಪೇಟೆ ಸಹಕರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಅವರು ಸಮ್ಮೇಳನಾಧ್ಯಕ್ಷ ಪ್ರೊ.ಪಿ.ತುಕಾರಾಂ ಪೂಜಾರಿ ಅವರನ್ನು ಸನ್ಮಾನಿಸಿದರು. ಕಸಾಪ ಜಿಲ್ಲಾಧ್ಯಕ್ಷ ಎಸ್.ಪ್ರದೀಪ್ ಕುಮಾರ ಕಲ್ಕೂರ ಸಮಾರೋಪದ ಅಧ್ಯಕ್ಷತೆ ವಹಿಸಿದ್ದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ, ಬಂಟ್ವಾಳ ಇದರ ಅಧ್ಯಕ್ಷ ಪ್ರೊ.ತುಕಾರಾಂ ಪೂಜಾರಿ ಅವರು ಸಮ್ಮೇಳನಾಧ್ಯಕ್ಷರ ಮಾತುಗಳನ್ನಾಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮುಂದಿನ ಸಮ್ಮೇಳನಕ್ಕೆ ಮಾಣಿಯ ಸಾಹಿತ್ಯಾಭಿಮಾನಿಗಳಿಗೆ ವೀಳ್ಯವನ್ನು ಪ್ರದಾನ ಮಾಡಿದರು.
ವೇದಿಕೆಯಲ್ಲಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್‍ನ ಅಧ್ಯಕ್ಷ ಸುದರ್ಶನ್ ಜೈನ್, ತಾಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಆಚಾರ್ಯ, ಜೆಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷೆ ನಮಿತಾ ನಿರ್ಮಲ್, ಚಂದ್ರಶೇಖರ ಗಾಂಭೀರ, ಸದಾಶಿವ ಡಿ.ತುಂಬೆ ಉಪಸ್ಥಿತರಿದ್ದರು.
ಸ್ವಾಗತ ಸಮಿತಿ ಅಧ್ಯಕ್ಷ ಕೆ.ಎನ್.ಗಂಗಾಧರ್ ಆಳ್ವ ಸ್ವಾಗತಿಸಿದರು. ಸದಾನಂದ ಆಳ್ವ ವಂದಿಸಿದರು. ಶಿಕ್ಷಕರಾದ ಸುಜಾತಾ, ಶ್ರೀನಿವಾಸ ಕೆದಿಲ ಕಾರ್ಯಕ್ರಮ ನಿರೂಪಿಸಿದರು. ಸುಖೇಶ್ ಶೆಟ್ಟಿ ಸಹರಿಸಿದರು. ತುಂಬೆ ಐಟಿಐ ಸಂಸ್ಥೆಯ ಪ್ರಾಂಶುಪಾಲ ನವೀನ್ ಕುಮಾರ್ ಕೆ.ಎಸ್. ಅವರ ನೇತೃತ್ವದ ವಿದ್ಯಾರ್ಥಿಗಳ ತಂಡ ಸ್ವಚ್ಛತಾ ಕಾರ್ಯ ಹಾಗೂ ಇನ್ನಿತರ ಕಾರ್ಯಗಳಿಗೆ ಸಾಥ್ ನೀಡಿತು.