ಬಂಟ್ವಾಳ: ಕಾಂಗ್ರೆಸ್ - ಬಿಜೆಪಿ ಮುಖಂಡರ ನಡುವೆ ಜಟಾಪಟಿ
ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ, ಡಿ. 9: ಬಂಟ್ವಾಳ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮ ವಿಚಾರವು ಮತ್ತೆ ಎರಡು ರಾಜಕೀಯ ಪಕ್ಷಗಳ ಸಂಘರ್ಷಕ್ಕೆ ಕಾರಣವಾಯಿತು.
ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬಾರದಂತೆ ಬಿಜೆಪಿ ಮುಖಂಡರು ತಹಶೀಲ್ದಾರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರು. ಇದನ್ನು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದು, ಈ ಕಾರಣದಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರುಗಳ ಮಧ್ಯೆ ಜಟಾಪಟಿ ನಡೆಯಿತು ಎಂದು ಹೇಳಲಾಗಿದೆ.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಇಂದಿರಾ ಕ್ಯಾಂಟೀನ್ ಕಾರ್ಯಕ್ರಮಕ್ಕೆ ಹಾಜರಾಗದೇ ಗೈರಾದರು. ರಾಹುಲ್ ಗಾಂಧಿ ಪರ ಕಾಂಗ್ರೆಸ್ ಘೋಷಣೆ ಕೂಗಿಕೊಂಡರೆ, ಬಿಜೆಪಿ ಮೋದಿ ಪರ ಘೋಷಣೆ ಕೂಗಿದರು.
Next Story