ಲೇಡಿಗೋಶನ್ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ: ನಾಲ್ವರು ಮಕ್ಕಳ ರಕ್ಷಣೆ

ಮಂಗಳೂರು, ಡಿ. 9: ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ತಕ್ಷಣ ಆಸ್ಪತ್ರೆಯ ಸಿಬ್ಬಂದಿ ವರ್ಗವು ನಾಲ್ಕು ಮಕ್ಕಳನ್ನು ರಕ್ಷಿಸಿದೆ.
ರವಿವಾರ ಮಧ್ಯಾಹ್ನ ಸುಮಾರು 12:50ರ ವೇಳೆಗೆ ಆಕ್ಸಿಜನ್‌ಗೆ ಬಳಸುವ ಸಿಲಿಂಡರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ವಿಷಯ ತಿಳಿದ ಆಗ್ನಿ ಶಾಮಕ ದಳದ ಸಿಬ್ಬಂದಿ ಆಸ್ಪತ್ರೆಗೆ ಧಾವಿಸುವ ಮುನ್ನವೇ ಆಸ್ಪತ್ರೆಯ ಸಿಬ್ಬಂದಿ ವರ್ಗವು ಬೆಂಕಿ ನಂದಿಸಿತಲ್ಲದೆ ಮಕ್ಕಳನ್ನು ರಕ್ಷಿಸಿದೆ.
ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Next Story