Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ:...

ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ: ಮೈತ್ರಿ ಸರಕಾರ-ವಿಪಕ್ಷ ಬಿಜೆಪಿ ನಡುವಿನ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ವಾರ್ತಾಭಾರತಿವಾರ್ತಾಭಾರತಿ9 Dec 2018 6:41 PM IST
share
ಚಳಿಗಾಲದ ಅಧಿವೇಶನಕ್ಕೆ ಕ್ಷಣಗಣನೆ: ಮೈತ್ರಿ ಸರಕಾರ-ವಿಪಕ್ಷ ಬಿಜೆಪಿ ನಡುವಿನ ವಾಗ್ಯುದ್ಧಕ್ಕೆ ವೇದಿಕೆ ಸಜ್ಜು

ಬೆಳಗಾವಿ, ಡಿ. 9: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಾಳೆಯಿಂದ(ಡಿ.10) ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನಕ್ಕೆ ಕುಂದಾನಗರಿ ಸಜ್ಜಾಗಿದ್ದು, ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಹಾಗೂ ವಿಪಕ್ಷ ಬಿಜೆಪಿ ಮಧ್ಯೆ ವಾಗ್ಯುದ್ಧಕ್ಕೆ ವೇದಿಕೆ ಸನ್ನದ್ಧವಾಗಿದೆ.

ಸೋಮವಾರ(ಡಿ.10) ಮಧ್ಯಾಹ್ನ 12:15ಕ್ಕೆ ವಿಧಾನ ಮಂಡಲ ಅಧಿವೇಶನ ವಿದ್ಯುಕ್ತವಾಗಿ ಆರಂಭಗೊಳ್ಳಲಿದ್ದು, ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಕಲಾಪ ನಡೆಯಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಬೆಳಗಾವಿಗೆ ತೆರಳಲಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಮಧ್ಯೆ ಕಬ್ಬು ಬೆಳೆಗಾರರ ಬಾಕಿ, ರೈತರ ಸಾಲಮನ್ನಾ ಗೊಂದಲ, ಬರ ಪರಿಹಾರ ಕಾರ್ಯದಲ್ಲಿನ ಸರಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಅಧಿವೇಶನದ ಹೊರಗೆ ಮತ್ತು ಒಳಗೆ ಹೋರಾಟ ಮುಂದಾಗಿದ್ದು, ಮೈತ್ರಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದತೆ ನಡೆಸಿದೆ.

ಮತ್ತೊಂದೆಡೆ ಸಂಪುಟ ವಿಸ್ತರಣೆ ಪದೇ ಪದೇ ಮುಂದೂಡುತ್ತಿರುವ ಕಾರಣ ಸಚಿವ ಅಕಾಂಕ್ಷಿಗಳ ಅಸಮಾಧಾನ, ಆಪರೇಷನ್ ಕಮಲದ ಭೀತಿಯ ನಡುವೆಯೇ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಗೈರು ಹಾಜರಿ, ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ.

ಬಿಜೆಪಿ ಆರೋಪಗಳಿಗೆ ತಕ್ಕ ಪ್ರತ್ಯುತ್ತರ ನೀಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಅನುಪಸ್ಥಿತಿಯಲ್ಲಿ ನಾಳೆಯಿಂದ ಹತ್ತು ದಿನಗಳ ಅಧಿವೇಶನ ನಡೆಯಲಿದ್ದು, ಎದುರಾಗಲಿರುವ ರಾಜಕೀಯ ಪರಿಸ್ಥಿತಿಯನ್ನು ಮಿತ್ರಪಕ್ಷಗಳು ಹೇಗೆ ನಿಭಾಯಿಸುತ್ತವೆ ಎಂಬುದು ಕುತೂಹಲ ಸೃಷ್ಟಿಸಿದೆ.

ಶಾಸಕರ ಗೈರು ಆತಂಕ: ಸಚಿವಾಕಾಂಕ್ಷಿ ಶಾಸಕರು ಅಧಿವೇಶನ ಕಲಾಪಕ್ಕೆ ಹಾಜರಾಗಲಿದ್ದಾರೆಯೇ, ಇಲ್ಲವೇ? ಅವರ ನಡೆ ಏನು ಎಂಬುದು ನಿಗೂಢವಾಗಿದೆ. ಹೀಗಾಗಿ ನಾಳೆಯಿಂದ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶ ರಾಜಕೀಯ ಮಹತ್ವಕ್ಕೆ ಸಾಕ್ಷಿಯಾಗಿದೆ.

ನಾಳೆಯಿಂದ ಡಿ.21ರ ವರೆಗೆ ಹತ್ತು ದಿನ ಕಾಲ ಅಧಿವೇಶನ ಕಲಾಪ ನಡೆಯಲಿದೆ. ಉಪ ಚುನಾವಣೆ ಗೆಲುವಿನ ಉತ್ಸಾಹದಲ್ಲಿ ಕಾಂಗ್ರೆಸ್-ಜೆಡಿಎಸ್ ಮುಖಂಡರಿದ್ದಾರೆ. ಈ ಮಧ್ಯೆಯೇ ಮುಂಬರಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸರಕಾರದ ವಿರುದ್ಧ ‘ಅಸ್ತ್ರ’ ಪ್ರಯೋಗಕ್ಕೆ ಸಜ್ಜುಗೊಂಡಿದೆ.

ಚಳಿಗಾಲದ ಅಧಿವೇಶನ ರಾಜಕೀಯ ಮೇಲಾಟದ ವೇದಿಕೆಯಾಗುವ ಸಾಧ್ಯತೆ ಇದ್ದು, ಆಡಳಿತಾರೂಢ ಮೈತ್ರಿ ಸರಕಾರ ಮತ್ತು ವಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧ, ಕಾವೇರಿದ ಚರ್ಚೆ, ಕೋಲಾಹಲದ ಮೂಲಕ ಮತ್ತಷ್ಟು ಬಿಸಿಯೇರಿಸುವುದು ನಿಶ್ಚಿತವಾಗಿದೆ.

ಸಮಸ್ಯೆಗಳ ಸರಮಾಲೆ: ಕಬ್ಬಿನ ಬಾಕಿ ಪಾವತಿ ಗೊಂದಲ, ರೈತರ ಸಾಲಮನ್ನಾ, ಬರ ನಿರ್ವಹಣೆಯಲ್ಲಿನ ಸರಕಾರದ ವೈಫಲ್ಯ, ಪರಿಶಿಷ್ಟ ನೌಕರರ ಭಡ್ತಿ ಮೀಸಲು ವಿವಾದ, ವರ್ಗಾವಣೆಯಲ್ಲಿ ಹಸ್ತಕ್ಷೇಪ, ಉತ್ತರ ಕರ್ನಾಟಕ ನಿರ್ಲಕ್ಷ, ರೈತರ ಆತ್ಮಹತ್ಯೆ ಪ್ರಕರಣಗಳನ್ನು ಮುಂದಿಟ್ಟುಕೊಂಡು ಸರಕಾರವನ್ನು ಅಡ್ಡಕತ್ತರಿಯಲ್ಲಿ ಸಿಲುಕಿರುವ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ.

ಪ್ರತ್ಯಾಸ್ತ್ರ ಪ್ರಯೋಗಕ್ಕೆ ಸಜ್ಜು: ಈ ಮಧ್ಯೆ ರೈತರ ಸಾಲಮನ್ನಾ ‘ಋಣಮುಕ್ತ ಪತ್ರ ವಿತರಣೆಗೆ ಚಾಲನೆ ನೀಡಿದ್ದು, ಬರ ನಿರ್ವಹಣೆಗೆ ಸರಕಾರ ಕೈಗೊಂಡ ಕ್ರಮಗಳು ಮತ್ತು ಮೈತ್ರಿ ಸರಕಾರದ ಹೊಸ ಯೋಜನೆಗಳ ಅನುಷ್ಟಾನದ ಮೂಲಕ ಆರು ತಿಂಗಳ ಸಾಧನೆಗಳನ್ನು ವಿವರಿಸಲು ಸಿಎಂ ಕುಮಾರಸ್ವಾಮಿ, ವಿಪಕ್ಷ ಬಿಜೆಪಿಗೆ ಪ್ರತ್ಯಾಸ್ತ್ರ ಪ್ರಯೋಗಕ್ಕೆ ಸಜ್ಜಾಗಿದ್ದಾರೆ.

ಶಾಸಕರ ಸ್ವಾಗತಕ್ಕೆ ಕುಂದಾನಗರಿ ಸಿಂಗಾರ: ವಿಧಾನಮಂಡಲ ಅಧಿವೇಶನಕ್ಕೆ ಕುಂದಾನಗರಿ ಬೆಳಗಾವಿ ನವ ವಧುವಿನಂತೆ ಸಿಂಗಾರಗೊಂಡಿದ್ದು, ಸುವರ್ಣ ವಿಧಾನಸೌಧ ಸೇರಿದಂತೆ ಜಿಲ್ಲೆಯಲ್ಲಿನ ಸರಕಾರಿ ಕಚೇರಿಗಳಿಗೆ ವಿಶೇಷ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ.

ರಾಜ್ಯಾದ್ಯಂತ ಫ್ಲೆಕ್ಸ್‌ಗಳ ಬಳಕೆಗೆ ನಿರ್ಬಂಧ ಹೇರಿ ಹೈಕೋರ್ಟ್ ಆದೇಶ ಹೊರಡಿಸಿದ್ದರೂ, ಬೆಳಗಾವಿ ನಗರದ ತುಂಬ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವರು, ಶಾಸಕರ ಸೇರಿದಂತೆ ವಿವಿಧ ಗಣ್ಯರಿಗೆ ಸ್ವಾಗತ ಕೋರುವ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ನಗರದ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, ರಸ್ತೆ ವಿಭಜಕಗಳಿಗೆ ಸುಣ್ಣ-ಬಣ್ಣ ಬಳಿದು ನಗರದ ಸ್ವಚ್ಛತೆಗೂ ಗಮನ ಹರಿಸಲಾಗಿದೆ.

ಊಟ-ವಸತಿ: ಅಧಿವೇಶನದಲ್ಲಿ ಭಾಗವಹಿಸುವ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಮುಖ್ಯಮಂತ್ರಿ, ಸ್ಪೀಕರ್, ಸಭಾಪತಿ, ಸಚಿವರುಗಳು ಹಾಗೂ ವಿಪಕ್ಷ ನಾಯಕರು ಬೆಳಗಾವಿಯಲ್ಲೆ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.

ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಬೆಳಗಾವಿ-ಹುಬ್ಬಳ್ಳಿಯ ಹೋಟೆಲ್‌ಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದೆ. ಸಿಎಂ ಕುಮಾರಸ್ವಾಮಿ ಸರಕಾರಿ ಸರ್ಕ್ಯೂಟ್ ಹೌಸ್ ಬದಲಿಗೆ ಈ ಬಾರಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

‘ಕರಾವಳಿ ಭಾಗದವರಿಗೆ ಕುಚಲಕ್ಕಿ ಗಂಜಿ, ಬೆಂಗಳೂರು ಭಾಗದವರಿಗೆ ರಾಗಿ ಮುದ್ದೆ- ಸೊಪ್ಪಿನ ಸಾರು, ಉತ್ತರ ಕರ್ನಾಟಕದವರಿಗೆ ಜೋಳದ ರೊಟ್ಟಿ-ಎಣ್ಣುಗಾಯಿ ಪಲ್ಯ, ಬೆಳಗಾವಿ ಭಾಗದ ಕುಂದ, ಕರದಂಡು ಸಿಹಿ ತಿಂಡಿ ಸೇರಿದಂತೆ ಅದ್ದೂರಿ ಆಹಾರ ಖಾದ್ಯಗಳ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X