Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಸ್ಯೆಗಳ ಪರಿಹಾರಕ್ಕೆ ಕಾನೂನಿನ ಅರಿವು...

ಸಮಸ್ಯೆಗಳ ಪರಿಹಾರಕ್ಕೆ ಕಾನೂನಿನ ಅರಿವು ಅವಶ್ಯ: ನ್ಯಾ.ಬಿ.ವಿ.ಪಾಟೀಲ

ವಾರ್ತಾಭಾರತಿವಾರ್ತಾಭಾರತಿ9 Dec 2018 10:37 PM IST
share

ಬೆಂಗಳೂರು, ಡಿ.9: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸಲಹಾ ಮಂಡಳಿಗಳನ್ನು ರಾಜ್ಯದ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತೆರೆಯಲಾಗಿದ್ದು, ಈ ಕೇಂದ್ರಗಳು 1.5 ಲಕ್ಷ ರೂ.ಕಡಿಮೆ ಆದಾಯ ಇರುವ ಎಲ್ಲ ವರ್ಗಗಳ ಜನರಿಗೆ ಮತ್ತು ಎಸ್ಸಿ, ಎಸ್ಟಿ, ಮಹಿಳೆ, ಮಕ್ಕಳು ಸೇರಿ ಇನ್ನಿತರ ದುರ್ಬಲ ವರ್ಗದವರಿಗೆ ಉಚಿತ ಕಾನೂನು ಸಲಹೆ ಹಾಗೂ ಸಹಾಯವನ್ನು ನೀಡಲಿವೆ ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶ ಬಿ.ವಿ. ಪಾಟೀಲ ಹೇಳಿದ್ದಾರೆ.

ರವಿವಾರ ಸಿಟಿ ಸಿವಿಲ್ ಕೋರ್ಟ್‌ನ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ವಕೀಲರ ಸಂಘ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಹಾಗೂ ಭ್ರಷ್ಟಾಚಾರ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸಲು, ಅರ್ಹ ವ್ಯಕ್ತಿಗಳಿಗೆ ಉಚಿತ ಕಾನೂನು ಸಹಾಯ ಮತ್ತು ಸಲಹೆ ನೀಡುವುದು, ಜನತಾ ನ್ಯಾಯಾಲಯ(ಲೋಕ್ ಅದಾಲತ್) ಮೂಲಕ ವ್ಯಾಜ್ಯಗಳನ್ನು ಸಂಧಾನದ ಮುಖಾಂತರ ಮತ್ತು ಕಡಿಮೆ ವೆಚ್ಚದಲ್ಲಿ ಇತ್ಯರ್ಥ ಮಾಡಿ ನ್ಯಾಯ ಒದಗಿಸುವುದಕ್ಕಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಕಾನೂನು ಸಲಹಾ ಮಂಡಳಿಗಳನ್ನು ತೆರೆಯಲಾಗಿದ್ದು, ಇದರ ಸದುಪಯೋಗವನ್ನು ದುರ್ಬಲ ವರ್ಗದವರು, ಬೌದ್ಧಿಕ ವಿಕಲ ಚೇತನರು, ಕೋಮು ಗಲಭೆಯ ಸಂತ್ರಸ್ತರು, ಧಾರ್ಮಿಕ ದೌರ್ಜನ್ಯಕ್ಕೊಳಗಾದವರು ಉಚಿತ ಕಾನೂನು ಸಲಹೆ ಹಾಗೂ ಸಹಾಯವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಕಾನೂನು ನಿಂತ ನೀರಲ್ಲ, ದಿನದಿಂದ ದಿನಕ್ಕೆ ಕಾನೂನು ಬದಲಾಗುತ್ತಿರುತ್ತದೆ. ಹೀಗಾಗಿ, ಕಾನೂನಿನ ಬಗ್ಗೆ ಅರಿವು ಇರಬೇಕು. ಕಾನೂನು ಸೇವಾ ಪ್ರಾಧಿಕಾರದಿಂದ ಕಾನೂನು ಅರಿವು-ನೆರವು ನೀಡಲಾಗುತ್ತಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಷ್ಟ್ರಾಧ್ಯಕ್ಷ ಮೋಹನರಾವ್ ನಲವಡೆ ಮಾತನಾಡಿ, ಶೇ.90ರಷ್ಟು ಜನರಿಗೆ ಕಾನೂನಿನ ಅರಿವು ಇಲ್ಲವಾಗಿದೆ. ಇವರುಗಳು ಮೊದಲು ಕಾನೂನು ಪ್ರಾಧಿಕಾರಕ್ಕೆ ಹೋಗಿ ಕಾನೂನಿನ ಅರಿವನ್ನು ಪಡೆದುಕೊಂಡರೆ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆ ಹರಿಸಿಕೊಳ್ಳಬಹುದು ಎಂದು ಎಂದು ಹೇಳಿದರು.

ಕರ್ನಾಟಕದ ಜನರು ಶಾಂತಿ ಸ್ವಭಾವದವರಾಗಿದ್ದು, ಸಾಮಾನ್ಯವಾಗಿ ಕಾನೂನನ್ನು ಉಲ್ಲಂಘಿಸುವ ಯಾವುದೆ ಪ್ರಯತ್ನವನ್ನು ಮಾಡುವುದಿಲ್ಲ. ಹಾಗೊಂದು ಬಾರಿ ಕಾನೂನನ್ನು ಉಲ್ಲಂಘಿಸಿ ತಪ್ಪುಗಳನ್ನು ಮಾಡಿದ್ದರೆ ಆ ತಪ್ಪುಗಳನ್ನು ಕಾನೂನು ಪ್ರಾಧಿಕಾರದಲ್ಲಿಯೇ ಪರಿಹರಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ನೆಮ್ಮದಿಯ ಜೀವನ ಸಾಗಿಸಲು ದೈನಂದಿನ ಜೀವನಕ್ಕೆ ಸಂಬಂಧಿಸಿದಂತೆ ಕಾನೂನು ಅರಿವು ಎಲ್ಲ ಪ್ರಜೆಗಳಲ್ಲಿಯೂ ಇರಬೇಕು. ಇದು ಸಾಧ್ಯವಾದರೆ, ಸಮಾಜ ಅನೇಕ ವಿಷಯಗಳಲ್ಲಿ ಅಂಧಕಾರದಿಂದ ಹೊರ ಬರಲು ಸಾಧ್ಯವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಸುನೀಲ್‌ಕುಮಾರ್ ಸಿಂಗ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X