Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶರೀಅತ್ ಸಂರಕ್ಷಣೆಗೆ ‘ಸಮಸ್ತ’ ಕಟಿಬದ್ಧ:...

ಶರೀಅತ್ ಸಂರಕ್ಷಣೆಗೆ ‘ಸಮಸ್ತ’ ಕಟಿಬದ್ಧ: ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್

ಮಂಗಳೂರಿನಲ್ಲಿ ಬೃಹತ್ ಸಮಸ್ತ ಶರೀಅತ್ ಸಂರಕ್ಷಣಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ9 Dec 2018 10:50 PM IST
share
ಶರೀಅತ್ ಸಂರಕ್ಷಣೆಗೆ ‘ಸಮಸ್ತ’ ಕಟಿಬದ್ಧ: ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್

ಮಂಗಳೂರು, ಡಿ.9: ಇಸ್ಲಾಮ್ ಅಲ್ಲಾಹನ ಧರ್ಮವಾಗಿದೆ. ಅದರಂತೆ ಶರೀಅತ್ ಕೂಡಾ ಅಲ್ಲಾಹನಿಂದ ರೂಪಿತವಾದುದಾಗಿದೆ. ಹಾಗಾಗಿ ಈ ಜಗತ್ತು ಅಂತ್ಯಗೊಳ್ಳುವವರೆಗೂ ಶರೀಅತ್ ನೆಲೆಗೊಳ್ಳಲಿದೆ. ಅದಕ್ಕೆ ಚ್ಯುತಿಯಾಗದಂತೆ ನೋಡಿಕೊಳ್ಳುವುದು ಮುಸ್ಲಿಮರ ಕರ್ತವ್ಯವಾಗಿದೆ. ‘ಸಮಸ್ತ’ ಕೂಡಾ ಶರೀಅತ್ ಸಂರಕ್ಷಣೆಗೆ ಕಟಿಬದ್ಧವಾಗಿದೆ ಎಂದು ಸಮಸ್ತ ಕೇರಳ ಜಂ ಇಯ್ಯತುಲ್ ಉಲಮಾ ಅಧ್ಯಕ್ಷ ಅಲ್‌ಹಾಜ್ ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದರು.

ಸಮಸ್ತ ಶರೀಅತ್ ಸಂರಕ್ಷಣಾ ಸಮಿತಿಯ ವತಿಯಿಂದ ‘ಸಂವಿಧಾನಾತ್ಮಕ ಹಕ್ಕುಗಳ ಸಂರಕ್ಷಣೆಗಾಗಿ ಕೈ ಜೋಡಿಸೋಣ: ಧಾರ್ಮಿಕತೆಯನ್ನು ಧ್ವಂಸ ಮಾಡುವ ಮೆಟೀರಿಯಲಿಸಂ ಸಿದ್ಧಾಂತವನ್ನು ಹಿಮ್ಮೆಟ್ಟಿಸೋಣ’ ಎಂಬ ಘೋಷಣೆಯೊಂದಿಗೆ ನಗರದ ನೆಹರೂ ಮೈದಾನಿನ ಶಹೀದ್ ಸಿ.ಎಂ. ಅಬ್ದುಲ್ಲಾ ಮುಸ್ಲಿಯಾರ್ ವೇದಿಕೆಯಲ್ಲಿ ರವಿವಾರ ನಡೆದ ‘ಶರೀಅತ್ ಸಂರಕ್ಷಣಾ ಸಮ್ಮೇಳನ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತದ ಎಲ್ಲಾ ಧರ್ಮೀಯರಿಗೂ ಅವರವರ ಧರ್ಮದ ವಿಧಿವಿಧಾನಗಳನ್ನು ಆಚರಿಸಲು ಅವಕಾಶವಿದೆ. ಅದರಂತೆ ಇಸ್ಲಾಮ್ ಧರ್ಮದಂತೆ ಮುಸ್ಲಿಮರು ಶರೀಅತ್ ನಿಯಮವನ್ನು ಅನುಸರಿಸುತ್ತಿದ್ದಾರೆ. ಇಸ್ಲಾಮ್ ಯಾವತ್ತೂ ಕೂಡಾ ತಲಾಖ್‌ಗೆ ಪ್ರೋತ್ಸಾಹ ನೀಡಲಿಲ್ಲ. ಆದರೆ, ಇಸ್ಲಾಮ್ ಧರ್ಮವನ್ನು ತೇಜೋವಧೆ ಮಾಡುವ ಭರದಲ್ಲಿ ಇಂತಹ ಸೂಕ್ಷ್ಮ ವಿಚಾರಗಳನ್ನು ಮುಂದಿಟ್ಟುಕೊಂಡು ಕೆಲವರು ಸಮಾಜದಲ್ಲಿ ಗೊಂದಲ ಸೃಷ್ಟಿಸಲಾಗುತ್ತದೆ ಎಂದ ಜಿಫ್ರಿ ಮುತ್ತುಕೋಯ ತಂಙಳ್, ಅಲ್ಪಸಂಖ್ಯಾತರ ಸಂರಕ್ಷಣೆಯು ಆಡಳಿತ ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಅದನ್ನು ನಮ್ಮನ್ನಾಳುವ ಸರಕಾರಗಳು ತಿಳಿದುಕೊಳ್ಳಬೇಕು. ಇಂತಹ ವಿಷಮ ಪರಿಸ್ಥಿತಿಯಲ್ಲಿ ಮುಸ್ಲಿಮ್ ಸಮುದಾಯಕ್ಕೆ ಎದುರಾಗುವ ಎಲ್ಲಾ ಸಮಸ್ಯೆಗಳು ಮತ್ತು ಸವಾಲುಗಳನ್ನು ಎದುರಿಸಲು ‘ಸಮಸ್ತ’ ಸನ್ನದ್ಧವಾಗಿದೆ ಎಂದರು.

ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೈಯದ್ ಝೈನುಲ್ ಆಬಿದೀನ್ ತಂಙಳ್ ಕುನ್ನಂಗೈ ದುಆಗೈದರು.

ಶೈಖುನಾ ಎಂಟಿ ಅಬ್ದುಲ್ಲಾ ಮುಸ್ಲಿಯಾರ್ ಮಲಪ್ಪುರಂ, ಅಬ್ದುಸ್ಸಮದ್ ಪೊಕೊಟೂರು, ನ್ಯಾಯವಾದಿಗಳಾದ ಓನಂಪಳ್ಳಿ ಮುಹಮ್ಮದ್ ಫೈಝಿ, ಹನೀಫ್ ಹುದವಿ, ಎಂ.ಎ. ಖಾಸಿಂ ಮುಸ್ಲಿಯಾರ್, ನಝೀರ್ ಅಝ್ಹರಿ ಮುಖ್ಯಭಾಷಣಗೈದರು.

ವೇದಿಕೆಯಲ್ಲಿ ಅತ್ರಾಡಿ ಖಾಝಿ ಅಲ್ಹಾಜ್ ಅಬೂಬಕರ್ ಮುಸ್ಲಿಯಾರ್, ಅಲಿ ತಂಙಳ್ ಕುಂಬೋಳ್, ಎಂ.ಎಸ್. ತಂಙಳ್ ವಾಲೆಮುಂಡೋವು, ಅಮೀರ್ ತಂಙಳ್ ಕಿನ್ಯ, ಹಬೀಬುಲ್ಲಾ ತಂಙಳ್, ಸೈಯದ್ ಕರಾವಳಿ ತಂಙಳ್, ಎಸ್.ಬಿ.ಮುಹಮ್ಮದ್ ದಾರಿಮಿ, ಖಾಸಿಂ ದಾರಿಮಿ, ತಬೂಕ್ ದಾರಿಮಿ, ಅನೀಸ್ ಕೌಸರಿ, ಹಾರೂನ್ ಅಹ್ಸನಿ, ಮಾಹಿನ್ ದಾರಿಮಿ, ಉಸ್ಮಾನ್ ಫೈಝಿ, ಕೆ.ಆರ್. ಹುಸೈನ್ ದಾರಿಮಿ ರೆಂಜಲಾಡಿ, ಸ್ವದಖತುಲ್ಲಾ ಫೈಝಿ, ಜಿ.ಎ. ಬಾವಾ, ಎಸ್.ಎಂ. ರಶೀದ್ ಹಾಜಿ, ಮಾಜಿ ಶಾಸಕ ಮೊಯ್ದಿನ್ ಬಾವ, ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ.ಎಸ್. ಮುಹಮ್ಮದ್ ಮಸೂದ್, ಐ. ಮೊಯ್ದಿನಬ್ಬ ಹಾಜಿ, ಹಾಜಿ ಅಬ್ದುರ್ರಝಾಕ್, ಕೆ.ಅಶ್ರಫ್, ನೌಶಾದ್ ಹಾಜಿ ಸೂರಲ್ಪಾಡಿ, ಕೆ.ಕೆ.ಶಾಹುಲ್ ಹಮೀದ್, ಮುಹಮ್ಮದ್ ಮೋನು, ಎಂ.ಎಸ್. ಮುಹಮ್ಮದ್, ಬಿ.ಎಚ್.ಖಾದರ್, ಟಿ.ಎಂ. ಶಹೀದ್ ಸುಳ್ಯ, ಮುಸ್ತಫಾ ಹಾಜಿ ಕೆಂಪಿ, ಹಾಜಿ ಅಬ್ದುಲ್ ರಶೀದ್ ಉಳ್ಳಾಲ, ಹನೀಫ್ ಹಾಜಿ ಬಂದರ್, ಶಾಹುಲ್ ಹಮೀದ್ ಮೆಟ್ರೊ, ಸಲೀಂ ಹಂಡೇಲು, ಅದ್ದು ಹಾಜಿ, ಮಜೀದ್ ಸೂರಲ್ಪಾಡಿ, ಸೈಯದ್ ಅಹ್ಮದ್ ಬಾಷಾ ತಂಙಳ್, ರಿಯಾಝುದ್ದೀನ್ ಬಂದರ್, ರಶೀದ್ ಹಾಜಿ ಪರ್ಲಡ್ಕ, ರಫೀಕ್ ಹಾಜಿ ಕೊಡಾಜೆ, ಹಕೀಂ ಪರ್ತಿಪ್ಪಾಡಿ, ಇಕ್ಬಾಲ್ ಮುಲ್ಕಿ ಮತ್ತಿತರರು ಉಪಸ್ಥಿತರಿದ್ದರು. 

ಹಾಫಿಝ್ ಅಬ್ದುಲ್ಲಾ ಕಿರಾಅತ್ ಪಠಿಸಿದರು. ಅನ್ವರ್ ಸಾದಾತ್ ಮತ್ತು ಕೆ.ಎಂ. ಕೊಡಂಗಾಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X