ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಎಸ್.ಶೆಟ್ಟಿಗೆ ಸನ್ಮಾನ

ಮಂಗಳೂರು, ಡಿ.10: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಎಸ್. ಶೆಟ್ಟಿಯವರಿಗೆ ಇತ್ತೀಚೆಗೆ ನಡೆದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕು ಕಸಾಪ ವತಿಯಿಂದ ಸನ್ಮಾನಿಸಲಾಯಿತು.
ಮಾಜಿ ಸಚಿವ ಬಿ. ರಮಾನಾಥ ರೈ ಶಾಲು ಹೊದಿಸಿ ಪೇಟ ಮುಡಿಸಿ, ಫಲಪುಷ್ಪಗಳೊಂದಿಗೆ ಸನ್ಮಾನ ಪತ್ರವನ್ನು ನೀಡಿ ಗೌರವಿಸಿದರು.
ಶಿಕ್ಷಣ ಕ್ಷೇತ್ರಕ್ಕೆ ಶೆಟ್ಟಿ ನೀಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಅವರನ್ನು ಸನ್ಮಾನಿಸಲಾಯಿತು.
ಕಸಾಪ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Next Story