ಖಾಸಗಿ ಬಸ್ ಢಿಕ್ಕಿ: ಉದ್ಯೋಗಿ ಸಾವು
ಬೆಂಗಳೂರು, ಡಿ.10: ತಂಗಿಯ ಮನೆಗೆ ಹೋಗುವ ಸಲುವಾಗಿ ವೇಗವಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಢಿಕ್ಕಿ ಹೊಡೆದು ಕಂಪನಿಯೊಂದರ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಯಶವಂತಪುರದ ಎಫ್ಡಿಐ ವೃತ್ತದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಯಡಿಯೂರಿನ ಸಿದ್ದೇಗೌಡ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಅವರು ಯಶವಂತಪುರದಲ್ಲಿರುವ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿ ಕೆಲಸ ಮುಗಿಸಿ ಬೆಳಗ್ಗೆ ಸಣ್ಣಕ್ಕಿ ಬಯಲಿನಲ್ಲಿರುವ ತಂಗಿಯ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದು, ವೇಗವಾಗಿ ಬಂದ ಖಾಸಗಿ ಬಸ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಪ್ರಕರಣವನ್ನು ದಾಖಲಿಸಿಕೊಂಡಿರುವ ಯಶವಂತಪುರದ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story